ಮತ್ತೆ ಶುರುವಾಗಲಿದೆ ಕೆಎಸ್ಸಾರ್ಟಿಸಿ ನೌಕರರ ಮುಷ್ಕರ ಮಾ.24ರಿಂದ ಮುಷ್ಕರಕ್ಕೆ ನಿರ್ಧಾರ

ಮತ್ತೆ ಶುರುವಾಗಲಿದೆ ಕೆಎಸ್ಸಾರ್ಟಿಸಿ ನೌಕರರ ಮುಷ್ಕರ ಮಾ.24ರಿಂದ ಮುಷ್ಕರಕ್ಕೆ ನಿರ್ಧಾರ

ಬೆಂಗಳೂರು: ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ ಮಾರ್ಚ್ 24ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲು ಸಾರಿಗೆ ನಿಗಮಗಳ ನೌಕರರ ಸಮಾನಮನಸ್ಕರ ವೇದಿಕೆ ನಿರ್ಧರಿಸಿದೆ.
ಸ್ವಾತಂತ್ರ್ಯ ಉದ್ಯಾನದಲ್ಲಿ ಮಾರ್ಚ್‌ 1ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ನೌಕರರು, ಬೇಡಿಕೆ ಈಡೇರಿಸುವ ಬಗ್ಗೆ ಶನಿವಾರ ಸಂಜೆಯೊಳಗೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಗಡುವು ನೀಡಿದ್ದರು.
ರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದಿರುವುದರಿಂದ ಅನಿವಾರ್ಯವಾಗಿ ಸಾರಿಗೆ ಮುಷ್ಕರಕ್ಕೆ ಕರೆ ನೀಡಲಾಗುತ್ತಿದೆ. ನಾಲ್ಕೂ ನಿಗಮಗಳ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುವುದು’ ಎಂದು ನೌಕರರ ಕೂಟದ ಅಧ್ಯಕ್ಷ ಆರ್.ಚಂದ್ರಶೇಖರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
2020ರ ಡಿಸೆಂಬರ್ ಮತ್ತು 2021ರ ಏಪ್ರಿಲ್‌ನಲ್ಲಿ ಸಾರಿಗೆ ಮುಷ್ಕರ ನಡೆಸಿದಾಗ ಸಂಧಾನ ಸಭೆ ನಡೆಸಿ 6ನೇ ವೇತನ ಆಯೋಗದ ಮಾದರಿಯಲ್ಲಿ ವೇತನ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆಗ ಸಾರಿಗೆ ಸಚಿವರಾಗಿದ್ದ ಲಕ್ಷ್ಮಣ ಸವದಿ, ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲೇ ಸಂಧಾನ ಸಭೆ ನಡೆದಿತ್ತು. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕವೂ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಸಾರಿಗೆ ಸಚಿವ ಶ್ರೀರಾಮುಲು ಅವರೂ ವೇತನ ಹೆಚ್ಚಳ ನಮ್ಮ ಬದ್ಧತೆ ಎಂದು ತಿಳಿಸಿದ್ದರು. ಆದರೆ, ಈವರೆಗೆ ಬೇಡಿಕೆ ಈಡೇರಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!