ನೇಣು ಹಾಕಿಕೊಂಡು ವಿದ್ಯಾರ್ಥಿ, ನೋಡಿದ ಮನೆ ಮಾಲೀಕನೂ ಸಾವು

ನೇಣು ಹಾಕಿಕೊಂಡು ವಿದ್ಯಾರ್ಥಿ, ನೋಡಿದ ಮನೆ ಮಾಲೀಕನೂ ಸಾವು
ಜೈಪುರ: 10 ನೇ ತರಗತಿಯ ವಿದ್ಯಾರ್ಥಿಯೊಬ್ಬ ಪರೀಕ್ಷೆಯ ಒತ್ತಡದ ಕಾರಣ ಬಾಡಿಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ವಿದ್ಯಾರ್ಥಿ ನೇಣು ಬಿಗಿದುಕೊಂಡಿರುವುದನ್ನು ನೋಡಿದ ಮನೆ ಮಾಲೀಕ ಸಹ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಈ ಘಟನೆ ನಡೆದಿರುವುದು ರಾಜಸ್ಥಾನದ ಧೋಲ್‌ಪುರ ಜಿಲ್ಲೆಯಲ್ಲಿ ಧೋಲ್‌ಪುರದ ಮಾಧವಾನಂದ ಕಾಲೋನಿಯಲ್ಲಿ ನಡೆದಿದೆ.
ಮೃತ ಬಾಲಕ ಪುಷ್ಪೇಂದ್ರ ರಜಪೂತ್ (17) ಖಾಸಗಿ ಶಾಲೆಯಲ್ಲಿ ಓದುತ್ತಿದ್ದ. ಬುಧವಾರ ಸ್ವಗ್ರಾಮದಿಂದ ಬಂದಿದ್ದು, ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆ ಮಾಲೀಕನ ಕುಟುಂಬದ ಸದಸ್ಯರಲ್ಲಿ ಒಬ್ಬರಾದ ಬಹದ್ದೂರ್ ಸಿಂಗ್ (70) ಎಂಬುವವರು, ಕೋಣೆಯಲ್ಲಿ ಶವ ನೇತಾಡುತ್ತಿರುವುದನ್ನು ಕಂಡು ಸಹಾಯಕ್ಕಾಗಿ ಕಿರುಚಿದ್ದಾರೆ. ಆಗಲೇ ಅವರು ಕುಸಿದುಬಿದ್ದು, ಹೃದಯಾಘಾತದಿಂದ ಮೃತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿ ಕೊಠಡಿಯಲ್ಲಿ ಮರಣಪತ್ರ ದೊರಕಿದ್ದು, ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ನಿಹಾಲ್‌ಗಂಜ್ ಠಾಣಾಧಿಕಾರಿ ವಿಜಯ್ ಮೀನಾ ತಿಳಿಸಿದ್ದಾರೆ.