ರಾಜ್ಯ ಸುದ್ದಿ

ಮುರುಘಾ ಶರಣರ ಪ್ರಕರಣದ ವಿಚಾರಣೆ ಫೆ.16ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗ ಮುರುಘಾ ಶರಣರ ಅಧಿಕಾರ ಚಲಾವಣೆ ವಿಚಾರದ ಪ್ರಕರಣ ಕೋರ್ಟ್‌ ಕಲಾಪದ ಅವಧಿ ಮೀರುತ್ತಿದ್ದ ಕಾರಣ ವಾದ ಮಂಡನೆ ಅಪೂರ್ಣಗೊಂಡಿದ್ದು, ವಿಚಾರಣೆ ಯನ್ನು ಫೆಬ್ರುವರಿ 16ಕ್ಕೆ ಮುಂದೂಡಲಾಗಿದೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ), ಅತ್ಯಾಚಾರ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಮಿನಲ್‌ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾ ಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿರುವ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿದ ರಿಟ್‌ ಅರ್ಜಿಯನ್ನು  ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ ಅಡಿಯಲ್ಲಿ ಬಂಧನಕ್ಕೊಳಗಾದ ಮಠದ ಪೀಠಾಧಿಪತಿಗಳ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿದ ಬಗ್ಗೆ ಯಾವುದಾದರೂ ಹೈಕೋರ್ಟ್‌, ಸುಪ್ರೀಂ ಕೋರ್ಟ್‌, ಸಂಸತ್ತಿನ ಚರ್ಚೆ ಇಲ್ಲವೇ ಕಾನೂನು ಆಯೋಗಗಳು ನೀಡಿರುವ ಅಭಿಪ್ರಾಯ, ತೀರ್ಪು ಅಥವಾ ವರದಿಗಳಿದ್ದರೆ ಅವುಗಳನ್ನು ಹಾಜರುಪಡಿಸಿ ಎಂದು ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಪರ ವಕೀಲರಿಗೆ ಹೈಕೋರ್ಟ್‌ ಆದೇಶಿಸಿದೆ.
ವಿಚಾರಣೆ ವೇಳೆ ಶರಣರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ. ನಾಗೇಶ್‌ ಅವರು, ‘ತನಿಖಾಧಿಕಾರಿ ನ್ಯಾಯಾಲಯಕ್ಕೆ ಕೇವಲ ಅಂತಿಮ ವರದಿ ಸಲ್ಲಿಸಿದ್ದಾರೆ. ಈ ವರದಿ ಆಧ ರಿಸಿ ಕೆಲವರು ನ್ಯಾಯಾಲಯದ ಮೆಟ್ಟಿ ಲೇರಿ ಅಧಿಕಾರ ನಿರ್ಬಂಧಿಸುವಂತೆ ಕೋರಿರುವುದು ಮತ್ತು ಇದನ್ನು ಮಾನ್ಯ ಮಾಡಿ ಧಾರ್ಮಿಕ ಸಂಸ್ಥೆಗಳ ದುರುಪ ಯೋಗ ತಡೆ ಕಾಯ್ದೆ–1988ರ ಕಲಂ 8 (2)ರ ಅನ್ವಯ ಶರಣರು ತಮ್ಮ ಅಧಿಕಾರ ಚಲಾಯಿಸಲು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧ ವಿಧಿಸಿರವುದು ಸಂಪೂರ್ಣ ಕಾನೂನು ಬಾಹಿರ ಎಂದು ಪ್ರತಿಪಾದಿಸಿದರು.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!