ಸ್ವಸಹಾಯ ಸಂಘದ ಮಹಿಳೆಯರಿಗೆ ಬಹಿರಂಗವಾಗಿ ೫೦೦ ರೂ. ನೋಟು ನೀಡಿದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನೂತನವಾಗಿ ನಿರ್ಮಿಸಿದ ಕಂದಾಯ ಉಪ ವಿಭಾಗದ ಉಪವಿಭಾಗಾಧಿಕಾರಿಗಳ ಕಚೇರಿಯನ್ನು ಕಂದಾಯ ಸಚಿವರಾದ ಆರ್.ಅಶೋಕ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ದಿನಾಂಕ ೨೮ರ ಇಂದು ಬೆಳಿಗ್ಗೆ ಉದ್ಘಾಟನೆ ಮಾಡಿದರು.
ಸಂಜೀವಿನಿ ಯೋಜನೆ ಅಡಿಯಲ್ಲಿ ಸ್ತಿçà ಶಕ್ತಿ ಸಂಘಗಳಿಗೆ ಸುತ್ತುನಿಧಿ ಹಾಗೂ ಸಾಮಾಜಿಕ ಭದ್ರತಾ ಯೋಜನೆ ಅಡಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಸಚಿವದ್ವಯರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಎಂ.ಪಿ ರೇಣುಕಾಚಾರ್ಯ ಸ್ವಸಹಾಯ ಸಂಘದ ಮಹಿಳೆಯರಿಗೆ ಬಹಿರಂಗವಾಗಿ ಐನೂರು ರೂ.ಗಳನ್ನು ನೀಡುತ್ತಿರುವುದು ಕಂಡುಬAತು. ಮುಖ್ಯಮAತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಡಿ.ಎಸ್. ಅರುಣ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ ರಿಷ್ಯಂತ್, ಹೊನ್ನಾಳಿ ತಾಲೂಕಿನ ಹಲವು ಜನಪ್ರತಿನಿಧಿಗಳು ಇದ್ದರು.