ಕರ್ನಾಟಕ ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ವಿವಾದವಿಲ್ಲ! ದಾವಣಗೆರೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

ದಾವಣಗೆರೆ: ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಕೋಮು ಗಲಭೆ ಅಥವಾ ಹಿಜಾಬ್ ವಿವಾದ ಇಲ್ಲ. ಈಗಾಗಲೇ ಆಯಾ ಹಂತದಲ್ಲಿ ವಿವಾದಗಳು ಬಗೆಹರಿಯುತ್ತಿವೆ. ಇಂತಹ ಘಟನೆಗಳು ಬೀದಿಗೆ ಬಂದಾಗ ಮಾತ್ರ ಗೃಹ ಇಲಾಖೆ ಕೆಲಸ ನಡೆಸಲಿದೆ. ಸದ್ಯಕ್ಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ದಾವಣಗೆರೆ ಎಸ್‌ಪಿ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದರು. ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಶಿಕ್ಷಣ ಸಚಿವ ನಾಗೇಶ್ ಮನೆಗೆ ನುಗ್ಗಿ ಚಡ್ಡಿ ತಂದು ಬೆಂಕಿ ಹಚ್ಚಿ ಕೈಗೊಂಡ ಹೋರಾಟ ಸರಿಯಾದ ದಾರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಕೂಡಾ ಹೋರಾಟ ಮಾಡಿಕೊಂಡೆ ಬಂದಿದ್ದೇವೆ. ಈ ರೀತಿಯ ಹೋರಾಟ ತಪ್ಪು. ಚಡ್ಡಿ ಸುಡುವ ಮೂಲಕ ಹೋರಾಟ ಮಾಡಿರುವರ‍್ಯಾರು ವಿದ್ಯಾರ್ಥಿಗಳಲ್ಲ. ದಾವಣಗೆರೆಯ ಮೂವರು ಜನ ಸಹ ಈ ಹೋರಾಟದಲ್ಲಿದ್ದು, ಅವರ ವಯಕ್ತಿಕ ಮಾಹಿತಿಗಳನ್ನು ಕಲೆಹಾಕಲಾಗುತ್ತಿದೆ. ಇವೆಲ್ಲದರ ಮಾಹಿತಿ ಸದ್ಯದಲ್ಲೇ ಹೊರಬೀಳಲಿದೆ ಎಂದರು. ಯಾವುದೇ ಹೋರಾಟ ಆರಂಭಿಸುವ ಮುನ್ನ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ತಹಶೀಲ್ದಾರ್ ಅವರ ಅನುಮತಿ ಪಡೆದ ನಂತರ ಹೋರಾಟ ಮಾಡಬೇಕಾಗಿತ್ತು. ಆದರೆ ಹೋರಾಟಕ್ಕೆ ಯಾವುದೇ ಪರವಾನಿಗೆ ಪಡೆಯದೆ ಹೋರಾಟ ಮಾಡಿದ್ದು, ಅಕ್ಷಮ್ಯ ಅಪರಾಧ ಎಂದು ಹೇಳಿದರು.

ಪಿಎಸ್‌ಐ ನೇಮಕಾತಿ ಹಗರಣ:

ರಾಜ್ಯದಲ್ಲಿ ನಡೆದ ಪಿಎಸ್‌ಐ ನೇಮಕಾತಿಯಲ್ಲಿ ನಡೆದ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಯುತ್ತಿದೆ. ಇಂತಹ ಅವ್ಯವಹಾರ ಮೊದಲಿನಿಂದಲೇ ನಡೆದುಕೊಂಡು ಬಂದಿದೆ. ಆದರೆ ಇಂತಹ ಅವ್ಯವಹಾರ ಮಾಡುವ ಕೆಲಸಕ್ಕೆ ಕೈ ಹಾಕಿದವರು ಎದೆ ಮುಟ್ಟಿಕೊಂಡು ನೋಡಿಕೊಳ್ಳುವಂತೆ ಮಾಡುತ್ತೇವೆ. ಈ ವಿಚಾರದಲ್ಲಿ ನಮ್ಮ ಇಲಾಖೆಯ ಡಿವೈಎಸ್ಪಿಗಳನ್ನೇ ಬಂಧಿಸಿದ್ದೇವೆ. ತನಿಖಾ ತಂಡ ಕೂಡಾ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಉಗ್ರನ ಬಂಧನ ಬಗ್ಗೆ ಹೆಚ್ಚು ಮಾತಾಡಲ್ಲ:

ಬೆಂಗಳೂರನಲ್ಲಿ ಉಗ್ರನ ಬಂಧನ ಹಿನ್ನೆಲೆ ಶ್ರೀನಗರ ಪೊಲೀಸರು ಓರ್ವನನ್ನ ಕರೆದುಕೊಂಡು ಹೋಗಿದ್ದಾರೆ. ನಮ್ಮ ಪೊಲೀಸರು ಸಹ ಶ್ರೀನಗರ ಪೊಲೀಸರ ಜೊತೆ ಸಂಪರ್ಕದಲ್ಲಿ ಇದ್ದಾರೆ. ಆತನ ಜೊತೆ ಯರ‍್ಯಾರು ಇದ್ದಾರೆ ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ದೇಶದ ಸಮಗ್ರತೆ ದೃಷ್ಟಿಯಿಂದ ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.

ಸೆಟ್ ಲೈಟ್ ಕಾಲ್ ವಿಚಾರ ತನಿಖೆ:

ಇನ್ನು ಸೆಟ್ ಲೈಟ್ ಕಾಲ್ ವಿಚಾರ ಕುರಿತು ಮಾತನಾಡಿದ ಅವರು ಈಗಾಗಲೇ ಶಿವಮೊಗ್ಗ ಸೇರಿದಂತೆ ಕೆಲವು ಕಡೆ ಸೆಟ್ ಲೈಟ್ ಕಾಲ್ ಮಾತಾಡಿದ್ದು ಗೊತ್ತಾಗಿದೆ. ಇದರ ಬಗ್ಗೆಯೂ ತನಿಖೆ ನಡೆದಿದೆ.ಕೇಂದ್ರ ಸರ್ಕಾರದ ಏಜೆನ್ಸಿ ಜೊತೆ ಸಂಪರ್ಕದಲ್ಲಿ ಇದ್ದೇವೆ. ಹಾಗೆಯೇ ದಾವಣಗೆರೆಯಲ್ಲಿ ನಡೆದ ಅಕ್ರಮ ಮರಳುಗಾರಿಕೆ ವಿಚಾರದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ತಮ್ಮ ಗಮನಕ್ಕೆ ಬಂದಿದ್ದು, ಇದರ ಕುರಿತು ತನಿಖೆ ನಡೆಯುತ್ತಿದೆ ಎಂದರು.

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!