ಚನ್ನಪಟ್ಟಣ :2028ರ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಿಂದ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಸೋಮವಾರ ಬಮುಲ್ ಉತ್ಸವದಲ್ಲಿ ಪಾಲ್ಗೊಂಡಿದ್ದ ಅವರು ನಂತ ಪತ್ರಕರ್ತರ ಜೊತೆ ಮಾತನಾಡಿದ ಅವರು, ಚನ್ನಪಟ್ಟಣದ ಅಭ್ಯರ್ಥಿಯಾಗಿ 2023ರ ಚುನಾವಣೆ ನನ್ನ ಕೊನೆಯ ಚುನಾವಣೆ ಎಂದು ಹೇಳಿದರು.
2028ರಲ್ಲಿ ಇಲ್ಲಿಂದ ಸ್ಪರ್ಧಿಸುವುದಿಲ್ಲ. ಇಲ್ಲಿನ ಕಾರ್ಯಕರ್ತರಿಗೇ ಟಿಕೆಟ್ ನೀಡುತ್ತೇನೆ. ನನಗೂ ರಾಜಕೀಯವಾಗಿ ವಿಶ್ರಾಂತಿಯ ಅಗತ್ಯವಿದೆ’ ಎಂದು ಕುಮಾರಸ್ವಾಮಿ ಹೇಳಿದರು.
ಹಾಸನದಲ್ಲಿ ಚುನಾವಣೆಗೆ ಅಭ್ಯರ್ಥಿ ಆಗಬೇಕು ಎಂದು ಆಸೆ ಇರುವವರು ಗೊಂದಲ ಸೃಷ್ಟಿಸುತ್ತಿದ್ದು, ಅದಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಸದ್ಯದಲ್ಲೇ ಇದಕ್ಕೆಲ್ಲ ತೆರೆ ಎಳೆಯುತ್ತೇವೆ. ಸದ್ಯದಲ್ಲಿಯೇ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಆಗಲಿದ್ದು, ಅದರಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿಯ ಹೆಸರೂ ಇರಲಿದೆ’ ಎಂದು ಅವರು ಹೇಳಿದರು.
