ಬಡವರ ಹೊಟ್ಟೆಗೆ ತಣ್ಣೀರು ಬಟ್ಟೆ ಇದು ಕೇಂದ್ರ ಸರ್ಕಾರದ ಬಜೆಟ್

ಕೇಂದ್ರ ಸರ್ಕಾರ
ದಾವಣಗೆರೆ : ಕೇಂದ್ರ ಸರ್ಕಾರದ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರು ಇಂದು ಮಂಡಿಸಿದ ಬಜೆಟ್ ಬಡವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಎಂಬಂತಾಗಿದೆ ಎಂದು ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪನವರು,ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಬಿ ಮಂಜಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ಅವರುಗಳು ದೂರಿದ್ದಾರೆ .
ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ ಪರಿಣಾಮದಿಂದಾಗಿ ಕೆಲಸ ಕಳೆದುಕೊಂಡ ಯುವ ಜನತೆಗೆ 20 ಲಕ್ಷ ಕೋಟಿ ತೆಗೆದಿಡಲಾಗಿದೆ ಎಂಬ ಅಂಶವು ಬಜೆಟ್ ನಲ್ಲಿ ಇಲ್ಲದಿರುವುದು ನೋಡಿದರೆ ಯುವಜನರಿಗೆ ಏನನ್ನು ಸರ್ಕಾರ ಕೇಂದ್ರ ಸರ್ಕಾರ ನೀಡದೆ ಯುವಜನತೆಯನ್ನು ವಂಚಿಸಿದೆ ಎಂದು ಆರೋಪಿಸಿದ್ದಾರೆ.
ಚಿನ್ನ ದರವನ್ನು ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮದಿಂದ ಬಡವರಿಗೂ ಅನಾನುಕೂಲವಾಗುವ ಸಾಧ್ಯತೆ ಇದ್ದು ಇದಕ್ಕೆ ನಿರ್ಮಲ ಸೀತಾರಾಮನ್ ಅವರು ಪರಿಹಾರವನ್ನು ಕಂಡುಕೊಳ್ಳಬಹುದಿತ್ತು ಎಂದು ಸಲಹೆ ನೀಡಿದ್ದಾರೆ .
ಈ ಬಜೆಟ್ ನಿಂದ ಕೇವಲ ದೊಡ್ಡ ಉದ್ಯಮಿಗಳಿಗೆ ಮಾತ್ರ ಅನುಕೂಲವಾಗಲಿದ್ದು ಸಣ್ಣಪುಟ್ಟ ಉದ್ಯಮಗಳಿಗೆ ಯಾವುದೇ ಅನುಕೂಲವಿಲ್ಲದೆ ಇರೋದ್ರಿಂದ ಉದ್ಯೋಗ ಸಮಸ್ಯೆ ಕಾಡಲಿದೆ ಎಂದು ತಿಳಿಸಿದ್ದಾರೆ.
ನರೇಗಾ ,ಗ್ರಾಮೀಣ ಕಾರ್ಮಿಕರು, ಉದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಬಜೆಟ್ ನಲ್ಲಿ ಯಾವುದೇ ಉಲ್ಲೇಖ ಇಲ್ಲದಿರುವುದು ಮೂಲಭೂತ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಕೆಲಸ ಕೇಂದ್ರ ಸರ್ಕಾರದಿಂದ ಆಗಬೇಕಿದೆ ಎಂದು ಅವರುಗಳು ತಿಳಿಸಿದ್ದಾರೆ.