ಜಿಎಂಐಟಿಯಲ್ಲಿ ಅಧ್ಯಾಪಕರುಗಳಿಗೆ ಮೂರು ದಿನದ ” ಪ್ರೋಸೆಸ್ ಮೈನಿಂಗ್ ” ತರಬೇತಿ ಕಾರ್ಯಕ್ರಮ

ನಗರದ ಪ್ರತಿಷ್ಠಿತ ಜಿ ಎಮ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಸೆಮಿನಾರ್ ಹಾಲ್ ನಲ್ಲಿ ಮೂರು ದಿನಗಳ ” ಪ್ರೋಸೆಸ್ ಮೈನಿಂಗ್ ” ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಈ ತರಬೇತಿ ಕಾರ್ಯಕ್ರಮವನ್ನು ಐಸಿಟಿ ಅಕ್ಯಾಡೆಮಿ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದು, ವಿವಿಧ ಕಾಲೇಜುಗಳಿಂದ 40 ಅಧ್ಯಾಪಕರುಗಳು ಪಾಲ್ಗೊಂಡಿದ್ದರು.


ಈ ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಐಸಿಟಿ ಅಕ್ಯಾಡೆಮಿ ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ನುರಿತ ತರಬೇತುದಾರರಾದ ಮಂಜುನಾಥ್ ಜಿ ಸಿ ನಡೆಸಿಕೊಡುವರೆಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ ಬಿ ಎನ್ ವೀರಪ್ಪ ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಮಾತನಾಡಿ, ಈ ತರಬೇತಿ ಕಾರ್ಯಕ್ರಮದ ಮೂಲಕ, ನಮ್ಮ ಅಧ್ಯಾಪಕರು ಪ್ರೋಸೆಸ್ ಮೈನಿಂಗ್ ಪ್ರಕ್ರಿಯೆಯ ತತ್ವಗಳು ಮತ್ತು ತಂತ್ರಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ಪಡೆಯುತ್ತಾರೆ ಎಂದು ತಿಳಿಸಿದರು.


ಕಾರ್ಯಕ್ರಮದ ಸ್ವಾಗತ ಭಾಷಣವನ್ನು ಕಂಪ್ಯೂಟರ್ ಸೈನ್ಸ್ ಅಂಡ್ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಕು ಚಂದನ ನೆರವೇರಿಸಿಕೊಟ್ಟರು. ವಂದನಾರ್ಪಣೆಯನ್ನು ವಿದ್ಯಾರ್ಥಿನಿ ಕು ಅಕ್ಷತ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಐಸಿಟಿ ಅಕ್ಯಾಡೆಮಿ ದಾವಣಗೆರೆ ವಿಭಾಗದ ಸಂಯೋಜಕರಾದ ಶ್ರೀ ಜಕಾವುಲ್ಲ, ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಪ್ರಧ್ಯಾಪಕರುಗಳಾದ ಪ್ರೊ ನಂದಿತ ಜಿ ಮತ್ತು ಪ್ರೊ ದೀಪು ಬಿ ಪಿ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಅಧ್ಯಾಪಕ ವರ್ಗದವರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!