ಸೋಮವಾರದಿಂದ ಮೂರು ದಿನಗಳ ಅಧಿವೇಶನ-ಸಿದ್ಧರಾಮಯ್ಯ

ಬೆಂಗಳೂರು: ಸೋಮವಾರದಿಂದ ಮೂರು ದಿನಗಳ ಕಾಲ ವಿಧಾನಸಭೆಯ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನೂತನ ಶಾಸಕರ ಪ್ರಮಾಣವಚನ ಸ್ವೀಕಾರಕ್ಕಾಗಿ ಅಧಿವೇಶನ ನಡೆಸಲಾಗುವುದು ಎಂದು ಹೇಳಿದರು.
ಅತ್ಯಂತ ಹಿರಿಯ ಶಾಸಕರಾಗಿರುವ ಆರ್.ವಿ. ದೇಶಪಾಂಡೆ ಅವರನ್ನು ವಿಧಾನಸಭೆಯ ಹಂಗಾಮಿ ಅಧ್ಯಕ್ಷರಾಗಿ ನೂತನ ಶಾಸಕರಿಗೆ ಪ್ರಮಾಣವಚನ ಬೋಧಿಸುವಂತೆ ಮನವಿ ಮಾಡಲಾಗುವುದು.
ಹಿಂದಿನ ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಲಿದ್ದು, ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕಿದೆ ಎಂದರು.
ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು. ಐದು ಗ್ಯಾರಂಟಿಗಳ ಅನುಷ್ಠಾನ ಸೇರಿದಂತೆ ಸರ್ಕಾರದ ಹೊಸ ಕಾರ್ಯಕ್ರಮಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.