ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು SSLC ವಿದ್ಯಾರ್ಥಿಗಳು ನೀರುಪಾಲು

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ರಫನ್, ಇಯನ್ ಹಾಗೂ ಸಮ್ಮರ್ ಎಂದು ಗುರುತಿಸಲಾಗಿದೆ.
ರಂಜಾನ್ ಉಪವಾಸ ಮುಗಿಸಿ ಮೂವರು SSLC ವಿದ್ಯಾರ್ಥಿಗಳು ಈಜಲು ತುಂಗಾನದಿಗೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಮೂವರು ವಿದ್ಯಾರ್ಥಿಗಳ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ