ಇಂದು ಬಿಐಇಟಿಯಲ್ಲಿ ಕಾರ್ಗಿಲ್ ವಿಜಯ ದಿವಸ್

ಇಂದು ಬಿಐಇಟಿಯಲ್ಲಿ ಕಾರ್ಗಿಲ್ ವಿಜಯ ದಿವಸ್

ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಿಂದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮವನ್ನು ಜು.೨೬ರ ಇಂದು ಬೆಳಿಗ್ಗೆ ೧೦:೩೦ಕ್ಕೆ ಕಾಲೇಜು ಆವರಣದಲ್ಲಿರುವ ಎಸ್.ಎಸ್ ಮಲ್ಲಿಕಾರ್ಜುನ್ ಸಾಂಸ್ಕೃತಿಕ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾಲೇಜಿನ ಪ್ರಾಂಶುಪಾಲರಾದ ಡಾ. ಎಚ್. ಅರವಿಂದ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕೇಂದ್ರ ರಕ್ಷಣಾ ಸಚಿವಾಲಯದ ಅಧೀಕ್ಷಕ ಇಂಜಿನಿಯರ್ ಮತ್ತು ಸೇನೆಯ ಶೌರ್ಯ ಪದಕ ಪುರಸ್ಕೃತ ಕ್ಯಾಪ್ಟನ್ ನವೀನ ನಾಗಪ್ಪ ಅಣಬೇರು ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಉಪನ್ಯಾಸ ನೀಡಲಿದ್ದಾರೆ. ಅತಿಥಿಗಳಾಗಿ ಕಾಲೇಜಿನ ನಿರ್ದೇಶಕರಾದ ಪ್ರೊ. ವೈ. ವೃಷಭೇಂದ್ರಪ್ಪ ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ಸಂಯೋಜಕರುಗಳಾದ ವಿಭಾಗ ಗಣಿತ ವಿಭಾಗದ ಮುಖ್ಯಸ್ಥ ಡಾ ಕೆ. ಎಸ್. ಬಸವರಾಜನ್, ಸಂಶೋಧನಾ ಮತ್ತು ಅಭಿವೃದ್ಧಿ ಡೀನ್ ಡಾ.ಎ.ಜಿ.ಶಂಕರಮೂರ್ತಿ ಉಪಸ್ಥಿತರಿರುವರು.

Leave a Reply

Your email address will not be published. Required fields are marked *

error: Content is protected !!