dattapeeta; ದತ್ತಪೀಠಕ್ಕೆ ಇಂದಿನಿಂದ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು, ನ.04: ಜಿಲ್ಲೆಯ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ (Dattapeeta) ನವೆಂಬರ್ 4ರಿಂದ 6ರವರೆಗೂ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

ಶ್ರೀ ರಾಮಸೇನೆ ಕಾರ್ಯಕರ್ತರಿಂದ ನಡೆಯುವ ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ಈಗಾಗಲೇ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

ಕಾಫಿನಾಡಿನ ಇನಾಂ ದತ್ತಾತ್ರೇಯ ಪೀಠದಲ್ಲಿ ನವೆಂಬರ್ 5ರಂದು ವಿಶೇಷ ಹೋಮ- ಹವನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾವಿರಕ್ಕೂ ಹೆಚ್ಚು ದತ್ತ ಮಾಲಾಧಾರಿಗಳಾಗಿ 7 ದಿನಗಳ ಕಾಲ ವ್ರತಾಚರಣೆಯಲ್ಲಿದ್ದು ಇಲ್ಲಿಗೆ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧ ವಿಧಿಸಿದೆ.

puneeth rajkumar; ಅಪ್ಪು ಆದರ್ಶಗಳು ಸಮಾಜಸೇವೆಗೆ ದಾರಿದೀಪ: ಗಡಿಗುಡಾಳ್ ಮಂಜುನಾಥ್  

ಇದಕ್ಕಾಗಿ ಕೈಮರ‌ ಬಳಿ ನಿರ್ಮಿಸಿರುವ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ವಾರಾಂತ್ಯದ ಹಿನ್ನೆಲೆಯಲ್ಲಿ ಸಾವಿರಾರು ಪ್ರವಾಸಿಗರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಆಗಮಿಸಿದ್ದು, ಈಗಾಗಲೇ ನೂರಾರು ಪ್ರವಾಸಿಗರ ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ.

ಶ್ರೀರಾಮ ಸೇನೆ ವತಿಯಿಂದ ಈ ಬಾರಿ 20ನೇ ವರ್ಷದ ದತ್ತಮಾಲಾ ಅಭಿಯಾನ ನಡೆಯುತ್ತಿದ್ದು, ರಾಜ್ಯದಾದ್ಯಂತ ಸಾವಿರಕ್ಕೂ ಹೆಚ್ಚು ಭಕ್ತರು ಮಾಲಾಧಾರಿಗಳಾಗಿ ಇಲ್ಲಿಗೆ ಆಗಮಿಸಲಿದ್ದಾರೆ. ಈ ವರ್ಷದ ದತ್ತಮಾಲಾ ಅಭಿಯಾನಕ್ಕೆ ನಾಗಸಾಧು ಕೂಡ ಆಗಮಿಸಲಿದ್ದು, ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!