ಶಬರಿಮಲೆ ಯಾತ್ರಿಗಳ ಬಗ್ಗೆ ನಿಗಾ: ಡಿಸಿ
ದಾವಣಗೆರೆ: ಶಬರಿಮಲೆ ಯಾತ್ರೆ ಮತ್ತು ತಮಿಳುನಾಡಿನ ಓಂ ಶಕ್ತಿ ಪೂಜೆ ಯಾತ್ರಾರ್ಥಿಗಳು ಸೇರಿ ಕೇರಳ, ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳಿಂದ ಬಂದವರ ಬಗ್ಗೆ ನಿಗಾ ವಹಿಸುವುದು ಅಗತ್ಯವಾಗಿದೆ. ಎಲ್ಲ ಯಾತ್ರಾರ್ಥಿಗಳಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಬೇಕು. ಆರ್‌ಟಿಒ ಅಧಿಕಾರಿಗಳು, ಟ್ರಾವೆಲ್ ಏಜೆನ್ಸಿಯವರೊಂದಿಗೆ ಸಂಪರ್ಕ ಸಾಧಿಸಿ, ಟ್ರಾವೆಲ್ ಏಜೆನ್ಸಿಗಳು, ಕೇರಳ, ಮಹಾರಾಷ್ಟ್ರ, ತಮಿಳುನಾಡಿಗೆ ಹೋಗಿಬರುವುದಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಜಿಲ್ಲೆಯ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮಾಹಿತಿ ಸಂಗ್ರಹಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ಮಾಹಿತಿ ನೀಡದ ಟ್ರಾವೆಲ್ಸ್‌ಗಳ ಅಂತರರಾಜ್ಯ ಓಡಾಟದ ಪರವಾನಗಿ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.