Traffic: ಜೂನ್ 16 ಸೋಮವಾರ ದಾವಣಗೆರೆಗೆ ಸಿಎಂ ಭೇಟಿ, ರಸ್ತೆ ಮಾರ್ಗ, ವಾಹನ ನಿಲ್ದಾಣ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಬಗ್ಗೆ ಮಾಹಿತಿ

ದಾವಣಗೆರೆ: (Traffic) ದಾವಣಗೆರೆ ನಗರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಮತ್ತು ಸಾರ್ವಜನಿಕ ಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸನ್ಮಾನ್ಯ ಶ್ರೀ ಸಿದ್ದರಾಮಯ್ಯ, ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಮತ್ತು ಇತರೆ ಮಂತ್ರಿಗಳು, ಶಾಸಕರುಗಳು ಗಣ್ಯರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿರುವ ಹಿನ್ನಲೆಯಲ್ಲಿ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಗಾಗಿ ಹಾಗೂ ಗಣ್ಯರ ಸೂಕ್ತ ಭಧ್ರತೆ ದೃಷ್ಟಿಯಿಂದ ಈ ಕೆಳಕಂಡಂತ ಸಾರ್ವಜನಿಕ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು, ದಾವಣಗೆರೆ ಜಿಲ್ಲೆ ರವರು ಆದೇಶಿಸಿದ್ದಾರೆ.
ಎಲ್ಲಾ ಸಾರ್ವಜನಿಕರು ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವವರು ಈ ಕೆಳಕಂಡಂತೆ ಸಾರ್ವಜನಿಕ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಹಾಗೂ ಮಾನ್ಯ ಮುಖ್ಯ ಮಂತ್ರಿಗಳ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು ನಿಗಧಿಪಡಿಸಿದ ಮಾರ್ಗಗಳಲ್ಲಿ ಸಂಚರಿಸುವುದು ಹಾಗೂ ನಿಗಧಿಪಡಿಸಿದ ಪಾರ್ಕಿಂಗ್ ಸ್ಥಳಗಳಲ್ಲಿ ತಮ್ಮ ವಾಹನಗಳನ್ನು ಪಾರ್ಕಿಂಗ್ ಮಾಡಲು ಈ ಮೂಲಕ ತಿಳಿಸಲಾಗಿದೆ. ಎಲ್ಲಾ ವಾಃನ ಚಾಲಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಲು ತಿಳಿಸಿದೆ.
*ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಈ ಮಾರ್ಗದಲ್ಲಿ ಸಂಚರಿಸುವುದು:*
1). ದಿನಾಂಕ:16-06-2025 ರಂದು ಬೆಳಿಗ್ಗೆ 08:00 ಗಂಟೆಯಿAದ ಸಂಜೆ 05:00 ಗಂಟೆಯವರೆಗೆ ಹರಿಹರ ಕಡೆಯಿಂದ ದೊಡ್ಡಬಾತಿ ಮುಖಾಂತರ ದಾವಣಗೆರೆಗೆ ಹಳೇ ಪಿ.ಬಿ ರಸ್ತೆಯಲ್ಲಿ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಹರಿಹರ ನಗರದಿಂದ ನೇರವಾಗಿ ಶಿವಮೊಗ್ಗ ಬೈಪಾಸ್ ಮೂಲಕ ಎನ್.ಹೆಚ್-48 ನಲ್ಲಿ ಚಲಿಸಿ ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ನೂತನವಾಗಿ ನಿರ್ಮಾಣವಾಗಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಹಾಗೂ ಹತ್ತಿಸಿಕೊಂಡು ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ಎನ್.ಹೆಚ್-48 ನಲ್ಲಿ ಕಾರ್ಯ ನಿರ್ವಹಿಸುವುದು
2). ಚಿತ್ರದುರ್ಗ (ಎನ್.ಹೆಚ್-48 ರಸ್ತೆ) ಮತ್ತು ಸಂತೆಬೆನ್ನೂರು (ಬೀರೂರು-ಸಮ್ಮಸಗಿ ರಸ್ತೆ) ಮಾರ್ಗವಾಗಿ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ನೂತನವಾಗಿ ನಿರ್ಮಾಣವಾಗಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಹಾಗೂ ಹತ್ತಿಸಿಕೊಂಡು ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ಎನ್.ಹೆಚ್-48 ನಲ್ಲಿ ಕಾರ್ಯ ನಿರ್ವಹಿಸುವುದು ಹಾಗೂ
3). ಜಗಳೂರು ಮತ್ತು ಕಂಚಿಕೆರೆ ಮಾರ್ಗವಾಗಿ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ನೇರವಾಗಿ ಅರಳಿಮರ ಮತ್ತು ವೆಂಕಟೇಶ್ವರ ಸರ್ಕಲ್ಗೆ ಆಗಮಿಸದೇ ಬೇತೂರು ಹಳ್ಳದ ಹತ್ತಿರ ನೂತನವಾಗಿ ನಿರ್ಮಾಣವಾಗಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಹಾಗೂ ಹತ್ತಿಸಿಕೊಂಡು ಅಲ್ಲಿಂದಲೇ ವಾಪಾಸ್ ಹೊರಡುವುದು
4). ಚನ್ನಗಿರಿ ಕಡೆಯಿಂದ ಹದಡಿ ರಸ್ತೆ ಮೂಲಕ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಹದಡಿ ಅಂಡರ್ ಪಾಸ್ ಮೂಲಕ ಹದಡಿ ರಸ್ತೆಯ ಮಾಗನೂರು ಬಸಪ್ಪ ಮೈದಾನದಲ್ಲಿ ಪ್ರಯಾಣಿಕರನ್ನು ಇಳಿಸಿ ಹಾಗೂ ಹತ್ತಿಸಿಕೊಂಡು ಅಲ್ಲಿಂದಲೇ ವಾಪಾಸ್ ಹೊರಡುವುದು.
*ಖಾಸಗಿ ಬಸ್ಸುಗಳು ಈ ಮಾರ್ಗದಲ್ಲಿ ಸಂಚರಿಸುವುದು:*
1) ದಿನಾಂಕ:16-06-2025 ರಂದು ಬೆಳಿಗ್ಗೆ 08:00 ಗಂಟೆಯಿAದ ಸಂಜೆ 05:00 ಗಂಟೆಯವರೆಗೆ ಹರಿಹರ ಕಡೆಯಿಂದ ದೊಡ್ಡಬಾತಿ ಮುಖಾಂತರ ಹಳೇ ಪಿ.ಬಿ ರಸ್ತೆಯಲ್ಲಿ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಖಾಸಗಿ ಬಸ್ಸುಗಳು ಹರಿಹರ ನಗರದಿಂದ ನೇರವಾಗಿ ಶಿವಮೊಗ್ಗ ಬೈಪಾಸ್ ಮೂಲಕ ಎನ್.ಹೆಚ್-48 ನಲ್ಲಿ ಚಲಿಸಿ ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ದನದ ಮಾರುಕಟ್ಟೆ ಸಮೀಪದ ಎ.ಪಿ.ಎಂ.ಸಿ ಆವರಣದಲ್ಲಿ ಪ್ರಯಾಣಿಕರನ್ನು ಇಳಿಸಿ ಹಾಗೂ ಹತ್ತಿಸಿಕೊಂಡು ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ಎನ್.ಹೆಚ್-48 ನಲ್ಲಿ ಕಾರ್ಯ ನಿರ್ವಹಿಸುವುದು
2) ಚಿತ್ರದುರ್ಗ (ಎನ್.ಹೆಚ್-48 ರಸ್ತೆ) ಮತ್ತು ಸಂತೆಬೆನ್ನೂರು (ಬೀರೂರು-ಸಮ್ಮಸಗಿ ರಸ್ತೆ) ಮಾರ್ಗವಾಗಿ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಖಾಸಗಿ ಬಸ್ಸುಗಳು ಬಾಡಾ ಕ್ರಾಸ್ ಮೂಲಕ ದಾವಣಗೆರೆ ನಗರಕ್ಕೆ ಆವರಗೆರೆ ಮಾರ್ಗವಾಗಿ ಬಂದು ದನದ ಮಾರುಕಟ್ಟೆ ಸಮೀಪದ ಎ.ಪಿ.ಎಂ.ಸಿ ಆವರಣದಲ್ಲಿ ಪ್ರಯಾಣಿಕರನ್ನು ಇಳಿಸಿ ಹಾಗೂ ಹತ್ತಿಸಿಕೊಂಡು ಅದೇ ಮಾರ್ಗವಾಗಿ ಮರಳಿ ಬಾಡಾ ಕ್ರಾಸ್ ಮೂಲಕ ಎನ್.ಹೆಚ್-48 ನಲ್ಲಿ ಕಾರ್ಯ ನಿರ್ವಹಿಸುವುದು.
3) ಜಗಳೂರು ಮತ್ತು ಕಂಚಿಕೆರೆ ಮಾರ್ಗವಾಗಿ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಖಾಸಗಿ ಬಸ್ಸುಗಳು ನೇರವಾಗಿ ಅರಳಿಮರ ಮತ್ತು ವೆಂಕಟೇಶ್ವರ ಸರ್ಕಲ್ಗೆ ಆಗಮಿಸದೇ ಬೇತೂರು ಹಳ್ಳದ ಹತ್ತಿರ ನೂತನವಾಗಿ ನಿರ್ಮಾಣವಾಗಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪ್ರಯಾಣಿಕರನ್ನು ಇಳಿಸಿ ಹಾಗೂ ಹತ್ತಿಸಿಕೊಂಡು ಅಲ್ಲಿಂದಲೇ ವಾಪಾಸ್ ಹೊರಡುವುದು
4) ಚನ್ನಗಿರಿ ಕಡೆಯಿಂದ ಹದಡಿ ರಸ್ತೆ ಮೂಲಕ ಕಾರ್ಯಕ್ರಮಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಖಾಸಗಿ ಬಸ್ಸುಗಳು ಹದಡಿ ಅಂಡರ್ ಪಾಸ್ ಮೂಲಕ ಹದಡಿ ರಸ್ತೆಯ ಮಾಗನೂರು ಬಸಪ್ಪ ಮೈದಾನದಲ್ಲಿ ಪ್ರಯಾಣಿಕರನ್ನು ಇಳಿಸಿ ಹಾಗೂ ಹತ್ತಿಸಿಕೊಂಡು ಅಲ್ಲಿಂದಲೇ ವಾಪಾಸ್ ಹೊರಡುವುದು.
*ಎಲ್ಲಾ ತರಹದ ಭಾರಿ & ಲಘು ಗೂಡ್ಸ್ ವಾಹನಗಳು :*
ದಿನಾಂಕ:16-06-2025 ರಂದು ಬೆಳಿಗ್ಗೆ 08:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಎಲ್ಲಾ ತರಹದ ಭಾರಿ & ಲಘು ಗೂಡ್ಸ್ ವಾಹನಗಳು ದಾವಣಗೆರೆ ನಗರದ ಹಳೇ ಪಿ.ಬಿ ರಸ್ತೆಯ ಆಯುರ್ವೇದಿಕ್ ಕಾಲೇಜ್ ನಿಂದ ಡಿ.ಸಿ.ಎಂ ಅಂಡರ್ ಬ್ರಿಡ್ಜ್ ವರೆಗೆ ಹಾಗೂ ನಗರದ ಹದಡಿ ರಸ್ತೆಯಲ್ಲಿ ಐ.ಟಿ.ಐ ಕಾಲೇಜ್ ಸರ್ಕಲ್ ನಿಂದ ಜಯದೇವ ಸರ್ಕಲ್ ಕಡೆಗೆ ಚಲಾಯಿಸದಂತೆ ಹಾಗೂ ನಗರದ ಶಾಮನೂರು ರಸ್ತೆಯಲ್ಲಿ ಶಾಮನೂರು ಅಂಡರ್ ಬ್ರಿಡ್ಜ್ ನಿಂದ ಲಕ್ಷಿö್ಮÃ ಫ್ಲೋರ್ ಮಿಲ್ & ಶಾರದಾಂಭ ಸರ್ಕಲ್ ಕಡೆಗೆ ಚಲಾಯಿಸದಂತೆ ನಿರ್ಭಂಧಿಸಲು ಕೋರಿದೆ.
*ಖಾಸಗಿ ಬಸ್ ನಿಲ್ದಾಣದ ಬಸ್ ಗಳು:-*
ನಗರದಲ್ಲಿನ ಖಾಸಗಿ ಬಸ್ ನಿಲ್ದಾಣದ (ಎಂ.ಜಿ ಸರ್ಕಲ್ ಹತ್ತಿರ ಇರುವ) ಮೂಲಕ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಬಸ್ಗಳು ದಿನಾಂಕ:16-06-2025 ರಂದು ಬೆಳಿಗ್ಗೆ 08:00 ಗಂಟೆಯಿAದ ಸಂಜೆ 05:00 ಗಂಟೆಯವರೆಗೆ ಸದರಿ ಬಸ್ ನಿಲ್ದಾಣದಿಂದ ಕಾರ್ಯ ನಿರ್ವಹಿಸದಂತೆ ಹಾಗೂ ಅವುಗಳು ಆ ದಿನ ಎ.ಪಿ.ಎಂ.ಸಿ & ಮಾಗನೂರು ಬಸಪ್ಪ ಮೈದಾನದಿಂದ ಕಾರ್ಯ ನಿರ್ವಹಿಸುವುದು.
*ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು:*
1. ದಿನಾಂಕ:16-06-2025 ರಂದು ಕಾರ್ಯಕ್ರಮದ ನಿಮಿತ್ತ ಆಗಮಿಸುವ ಎಲ್ಲಾ ಬಸ್ ಗಳು ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಹಾಗೂ ಅರುಣ ವೃತ್ತದಿದ ವಿನೋಬ ನಗರ 3 ನೇ ಮುಖ್ಯ ರಸ್ತೆಯ ಎಡಬಾಗದಲ್ಲಿ ಹಾಗೂ ನಗರದ ಪುಷ್ಪಾಂಜಲಿ ಚಿತ್ರಮಂದಿರದಿAದ ಈರುಳ್ಳಿ ಮಾರ್ಕೇಟ್ ವರೆಗೆ ರೆಲ್ವೇ ಹಳಿ ಪಕ್ಕದಲ್ಲಿನ ಪಾರ್ಕಿಂಗ್ ಸ್ಥಳದಲ್ಲಿ ಬಸ್ ಗಳನ್ನು ನಿಲ್ಲಿಸುವುದು.
2. ದಿನಾಂಕ:16-06-2025 ರಂದು ಕಾರ್ಯಕ್ರಮದ ನಿಮಿತ್ತ ಆಗಮಿಸುವ ಎಲ್ಲಾ ದ್ವಿ ಚಕ್ರ ವಾಹನಗಳು ದಾವಣಗೆರೆ ನಗರದ ಬೀರಲಿಂಗೇಶ್ವರ ದೇವಾಸ್ಥಾನದ ಆವರಣ ಹಾಗೂ ಆರ್.ಎಲ್. ಲಾ ಕಾಲೇಜ್ ಹಿಂಬಾಗದ ಮೈದಾನದಲ್ಲಿನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುವುದು.
3. ಕಾರ್ಯಕ್ರಮದ ನಿಮಿತ್ತ ಆಗಮಿಸುವ ಎಲ್ಲಾ ನಾಲ್ಕು ಚಕ್ರ ವಾಹನಗಳು ಅರುಣ ವೃತ್ತದ ಬಳಿ ಇರುವ ಹೊಳೆಹೊನ್ನೂರು ತೋಟದ ಖಾಲಿ ಜಾಗದಲ್ಲಿನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುವುದು.