ಕಟೀಲು ಮೇಳದಲ್ಲಿ ದುರ್ಘಟನೆ: ಯಕ್ಷಗಾನ ನಡೆಯುತ್ತಿದ್ದಾಗಲೇ ಹೃದಯಾಘಾತ; ಖ್ಯಾತ ಕಲಾವಿದ ವಿಧಿವಶ

ಮಂಗಳೂರು: ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾಗಿದ್ದಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ‌ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಎಂಬವರು ವೇಷಧಾರಿಯಾಗಿ ಅಭಿನಯಿಸುತ್ತಿದ್ದಾಗಲೇ ಕುಸಿದು ಬಿದ್ದಿದ್ದಾರೆ.

‘ತ್ರಿಜನ್ಮ ಮೋಕ್ಷ’ ಯಕ್ಷಗಾನ ಪ್ರದರ್ಶನದಲ್ಲೇ ಶಿಶುಪಾಲ ಪಾತ್ರವನ್ಬು ಗುರುವಪ್ಪ ಬಾಯಾರು ಮಾಡುತ್ತಿದ್ದರು.

ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ನಿನ್ನೆ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುಪಪ್ಪ ಬಾಯರು ರಂಗಸ್ಥಳದಲ್ಲೇ ಇದ್ದರು, ಸಹ ಕಲಾವಿದರು ರಂಗಸ್ಥಳದಲ್ಲಿ ಕುಣಿಯುತ್ತಿದ್ದಾಗ ಪಕ್ಕದಲ್ಲೇ ಇದ್ದ ಗುರುವಪ್ಪ ಬಾಯಾರು ಅವರು ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದಾರೆ. ಅವರು ಹೃದಾಯಾಘಾತವಾಗಿ ರಂಗಸ್ಥಳದಿಂದ ಕೆಳಗೆ ಕುಸಿದು ಬಿದ್ದಿದ್ದರೆ ಎನ್ಬಲಾಗಿದೆ. ಕೂಡಲೇ ಅವರನ್ನು ಸ್ಥಳೀಯ ಅಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಅಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿ ಆಗದೆ ವಿಧಿವಶರಾದರು.

Leave a Reply

Your email address will not be published. Required fields are marked *

error: Content is protected !!