ನಟ ಯಶ್ ಕಟೌಟ್ ಕಟ್ಟುವಾಗ ದುರಂತ; ವಿದ್ಯುತ್ ಶಾಕ್‌ಗೆ ಮೂವರು ಬಲಿ
ಗದಗ: ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ನಿಮಿತ್ತ ಬ್ಯಾನರ್ ಕಟ್ಟುತ್ತಿದ್ದ ಯುವಕರು ಸಾಮೂಹಿಕವಾಗಿ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ.
ಗದಗ್ ಜಿಲ್ಲೆ ಲಕ್ಷ್ಮೇಶ್ವರ ಸಮೀಪದ ಸೂರಣಗಿ ಎಂಬಲ್ಲಿ ಈ ಅವಘಡ ಸಂಭವಿಸಿದ್ದು ಕಟೌಟ್ ಕಟ್ಟುವ ವೇಳೆ ವಿದ್ಯತ್ ಪ್ರವಹಿಸಿ ಮೂವರು ಯುವಕರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.
ನೀಲಗಿರಿ ತೋಪಿಗೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿದೆ ಎನ್ನಲಾಗಿದೆ. ಮೃತ ಯುವಕರನ್ನು ಹನಮಂತ, ಮುರಳಿ ನಡವಿನಮನಿ, ನವೀನ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಮಂಜುನಾಥ್, ದೀಪಕ್, ಪ್ರಕಾಶ ಮ್ಯಾಗೇರಿ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.