ಕರಾಮುವಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ 

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ಜೂ.28 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆ.10 ಗಂಟೆಯಿಂದ ಸಂ.05 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂ 0821-2515944 ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಕುಲಸಚಿವರಾದ ಪ್ರೊ.ಆರ್.ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!