ದಾವಣಗೆರೆ: ಜಿಲ್ಲಾ ಪೊಲೀಸ್, ಮಕ್ಕಳ ವಿಶೇಷ ಪೊಲೀಸ್ ಘಟಕದಿಂದ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ಸಾಮರ್ಥ್ಯಭಿವೃದ್ಧಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಬಾಲ ನ್ಯಾಯ ಮಂಡಳಿಯ ಅಧ್ಯಕ್ಷರ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ನಿವೇದಿತಾ ಟಿ.ಎಂ. ಕಾರ್ಯಾಗಾರ ಉದ್ಘಾಟಿಸಿದರು.
ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ. ಬಸರಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಶ್ರೀಮತಿ ವಾಸಂತಿ ಉಪ್ಪಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ಪೂರ್ಣಿಮಾ ಎಂ., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮನಾಯ್ಕ, ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ ಭಾಗವಹಿಸಿದ್ದರು.
ಮಕ್ಕಳ ನ್ಯಾಯ ಕಾಯ್ದೆ -2015, ನಿಯಮ 2016 ಪ್ರಕರಣ ನಿರ್ವಹಣೆ ಮತ್ತು ಮಕ್ಕಳ ವಿಶೇಷ ಪೊಲೀಸ್ ಘಟಕದ ನಿರ್ವಹಣೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ 2006, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಅಧಿನಿಯಮ (ಪೋಕ್ಸೋ) 2012, ಮಕ್ಕಳು ಕಾಣೆಯಾದ ಪ್ರಕರಣಗಳಲ್ಲಿ ಪ್ರಾಮಾಣಿಕ ನಿರ್ವಹಣಾ ಪ್ರಕ್ರಿಯೆ, ಮಕ್ಕಳ ಸಾಗಾಣಿಕೆ ಮತ್ತು ಮಕ್ಕಳ ಬಿಕ್ಷಾಟನೆ ವಿಷಯಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರದಲ್ಲಿ ತರಬೇತಿ ನೀಡಲಾಯಿತು.
ಪೊಲೀಸ್ ತರಬೇತಿದಾರರಾದ ರೋಹಿತ್ ಸಿ.ಜಿ. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಜಿಲ್ಲಾ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
