ಮುಖ್ಯಮಂತ್ರಿ ಆಗುವ ಆಸೆ ತೋರಿದ ಸಾರಿಗೆ ಸಚಿವ ಶ್ರೀರಾಮುಲು
ರಾಯಚೂರ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ರಾಜಕೀಯ ನಾಯಕರ ಒಂದೊಂದು ಹೇಳಿಕೆಯೂ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸಚಿವ ಬಿ. ಶ್ರೀರಾಮುಲು ಹೆಸರು ಮುನ್ನಲೆಗೆ ಬಂದಿತ್ತು. ಈಗ ಮತ್ತೆ ಚುನಾವಣೆ ಹತ್ತಿರವಾಗುತ್ತಿದ್ದು, ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಒಲಿಯಲಿದೆ ಎಂಬ ವಂದತಿಗಳು ಮತ್ತೆ ಎದ್ದಿವೆ. ಆದರೆ ಇದಕ್ಕೆ ತೆರೆ ಎಳೆದ ಶ್ರೀರಾಮುಲು ಒಂದು ಹೆಜ್ಜೆ ಮುಂದೆ ಹೋಗಿ ಉಪ ಮುಖ್ಯಮಂತ್ರಿ ಪಾಳಯ ಹೋಗಿದೆ, ಈಗ ಪ್ರಮೋಷನ್, ಈಗ ಮುಖ್ಯಮಂತ್ರಿ ಪಾಳಯ, ಪಾರ್ಟಿ ಅವಕಾಶ ಮಾಡಿಕೊಟ್ಟರೇ ಸಿಎಂ ಆಗುತ್ತೇನೆ ಎನ್ನುವ ಮೂಲಕ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಶ್ರೀರಾಮುಲು, ಮುಖ್ಯಮಂತ್ರಿ ಆಕಾಂಕ್ಷಿ ಅನ್ನೋ ಆಸೆ ಬಿಚ್ಚಿಟ್ಟಿದ್ದಾರೆ.