ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರಿಗೆ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಶ್ರದ್ಧಾಂಜಲಿ
ದಾವಣಗೆರೆ: ಜಿಲ್ಲಾ ವರದಿಗಾರರ ಕೂಟದಲ್ಲಿ ಈಚೆಗೆ ಅಕಾಲಿಕ ಮರಣ ಹೊಂದಿದ ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರಾದ ಗುರುಲಿಂಗಸ್ವಾಮಿ ಹೊಳಿಮಠ ಅವರಿಗೆ ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಇದೇ ವೇಳೆ ಮಾತನಾಡಿದ ಕೂಟದ ಅಧ್ಯಕ್ಷರಾದ ಕೆ. ಏಕಾಂತಪ್ಪ ಅವರು, ಪತ್ರಕರ್ತರು ಸದಾ ಒತ್ತಡದಲ್ಲಿಯೇ ಕಾರ್ಯನಿರ್ವಹಣೆ ಮಾಡಬೇಕಾದ ಪರಿಸ್ಥಿತಿ ಇರುವುದರಿಂದ ತಮ್ಮ ಆರೋಗ್ಯದ ಕಡೆಗೆ ಅವರು ಹೆಚ್ಚು ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಬಹುಶಃ ಇದೇ ಕಾರಣಕ್ಕಾಗಿಯೇ ಗುರುಲಿಂಗಸ್ವಾಮಿ ಅವರು ಅಕಾಲಿಕ ಮರಣ ಹೊಂದಿರಬಹುದೆಂದು ಹೇಳಿದರು.
ಪತ್ರಕರ್ತರು ಮತ್ತೊಬ್ಬರಿಗೆ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಹೇಳುತ್ತಾರೆ. ಆದರೆ, ತಮ್ಮ ಕಾರ್ಯಭಾರದಲ್ಲಿ ಅವರೇ ಆರೋಗ್ಯವನ್ನು ಮರೆಯುತ್ತಾರೆ. ಇನ್ನಾದರೂ ಯುವಪತ್ರಕರ್ತರು ಸೇರಿದಂತೆ ಎಲ್ಲರೂ ಕೆಲಸದ ಜೊತೆಗೆ ಆರೋಗ್ಯದ ಕಡೆಗೂ ಗಮನಕೊಡಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕೂಟದ ಪ್ರಧಾನ ಕಾರ್ಯದರ್ಶಿ ಡಾ. ಸಿ. ವರದರಾಜ್, ಖಜಾಂಚಿ ಮಧುನಾಗರಾಜ್ ಕುಂದುವಾಡ, ಕಾನಿಪಸಂಘದ ಪ್ರಧಾನ ಕಾರ್ಯದರ್ಶಿ ಫಕೃದ್ದೀನ್, ಕೂಟದ ಪಿಆರ್‌ಓ ಡಿ. ರಂಗನಾಥರಾವ್, ಪದಾಧಿಕಾರಿಗಳಾದ ಸಂಜಯ್, ಪುನೀತ್ ಆಪ್ತಿ ಮತ್ತಿತರರು ಇದ್ದರು.