Tutorials: ಖಾಸಗಿ ಶಾಲೆಗಳಲ್ಲಿ ಅನಧಿಕೃತ ವಸತಿನಿಲಯ ಮತ್ತು ಟ್ಯುಟೋರಿಯಲ್‌, ವರದಿ ಸಲ್ಲಿಸುವಂತೆ ಆಯುಕ್ತರಿಂದ ಆದೇಶ

Tutorials: Unauthorized boarding and tutorials in private schools, order by commissioner to submit report

ಬೆಂಗಳೂರು: (Tutorials) ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲೆ ನಡೆಸಲು ಅನುಮತಿ ಪಡೆದು ಕೆಲವು ಶಾಲಾ ಆಡಳಿತ ಮಂಡಳಿಗಳು ಅನಧಿಕೃತವಾಗಿ ಶಾಲಾ ಆವರಣದಲ್ಲಿ ವಸತಿ ನಿಲಯ ಮತ್ತು ಟ್ಯುಟೋರಿಯಲ್‌ಗಳನ್ನು ನಡೆಸುತ್ತಿರುವುದು ಕಂಡುಬಂದಿರುತ್ತದೆ. ಈ ರೀತಿ ಅನಧಿಕೃತವಾಗಿ ನಡೆಸುತ್ತಿರುವ ವಸತಿ ನಿಲಯಗಳು/ಟ್ಯುಟೋರಿಯಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಅವಘಡ ಸಂಭವಿಸದಂತೆ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಶಾಲೆ ನಡೆಸಲು ಅನುಮತಿ ಪಡೆದು ಅನಧಿಕೃತವಾಗಿ ವಸತಿ ನಿಲಯ ಮತ್ತು ಟ್ಯುಟೋರಿಯಲ್‌ಗಳನ್ನು ನಡೆಸುತ್ತಿರುವ ಬಗ್ಗೆ ತಮ್ಮ ಜಿಲ್ಲಾ ವ್ಯಾಪ್ತಿಯ ಖಾಸಗಿ ಶಾಲೆಗಳಲ್ಲಿ ತಕ್ಷಣ ಪರಿಶೀಲಿಸಿ 03 ದಿನಗಳೊಳಗಾಗಿ ಈ ಕಚೇರಿಗೆ ಅಗತ್ಯ ಮಾಹಿತಿ ಮತ್ತು ದಾಖಲೆಗಳೊಂದಿಗೆ ವರದಿ ಸಲ್ಲಿಸಲು ಸೂಚಿಸಿದೆ. ಈ ರೀತಿ ಅನಧಿಕೃತವಾಗಿ ಟ್ಯುಟೋರಿಯಲ್‌ಗಳು ಮತ್ತು ವಸತಿ ನಿಲಯಗಳನ್ನು ನಡೆಸುತ್ತಿರುವ ಶಾಲಾ ಆಡಳಿತ ಮಂಡಳಿಗಳ ವಿರುದ್ಧ ನಿಯಮಾನುಸಾರ ಅಗತ್ಯ ಕ್ರಮವಹಿಸಲು ಸೂಚಿಸಿದೆ.

ಅನಧಿಕೃತವಾಗಿ ನಡೆಸಲಾಗುತ್ತಿರುವ ವಸತಿ ನಿಲಯಗಳು ಅಥವಾ ಟ್ಯುಟೋರಿಯಲ್‌ಗಳಲ್ಲಿ ಯಾವುದೇ ಅವಘಡ ಉಂಟಾದಲ್ಲಿ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪನಿರ್ದೇಶಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು (ಆಡಳಿತ) ರವರಿಗೆ ಮುಂದಿನ ಅಗತ್ಯ ಕ್ರಮಕ್ಕಾಗಿ ಹಾಗೂ ರಾಜ್ಯದ ಎಲ್ಲಾ ತಾಲ್ಲೂಕು/ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮುಂದಿನ ಅಗತ್ಯ ಕ್ರಮಕ್ಕಾಗಿ ಪತ್ರ ಬರೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!