ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಕೋವಿಡ್ ದೃಢ!

ಬೆಂಗಳೂರು: ರಾಜ್ಯದಲ್ಲಿ ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ ‘ನಮ್ಮ ನೀರು ನಮ್ಮ ಹಕ್ಕು’ ಪಾದಯಾತ್ರೆಯಲ್ಲಿ ಭಾಗವಹಿಸಿದ ಇಬ್ಬರು ನಾಯಕರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಕಾಂಗ್ರೆಸ್ ಹಿರಿಯ ನಾಯಕ ಹೆಚ್‌ಎಂ ರೇವಣ್ಣ ಹಾಗೂ ಸಿಎಂ ಇಬ್ರಾಹಿಂ ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ.

ಈಗಾಗಲೇ ರಾಜ್ಯ ಬಿಜೆಪಿ ಸರ್ಕಾರ ಮೂರನೇ ಅಲೆ ಪ್ರಾರಂಭವಾಗಿರುವ ಹಿನ್ನೆಲೆ ಪಾದಯಾತ್ರೆ ತಡೆಯುವಂತೆ ಕಾಂಗ್ರೆಸ್ ಗೆ ಸೂಚಿಸಿತ್ತಾದರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿರೋಧಿಸಿ ಈ ಪಾದಯಾತ್ರೆ ಹಮ್ಮಿಕೊಂಡಿದ್ದು, ಈಗ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿರುವುದು ಮತ್ತಷ್ಟು ಆತಂಕ ಹೆಚ್ಚಾಗಿದೆ.

Leave a Reply

Your email address will not be published. Required fields are marked *

error: Content is protected !!