ಇಬ್ಬರು ಬಿಜೆಪಿ ಮಾಜಿ ಶಾಸಕರು, ಮಾಜಿ ಮೇಯರ್ ಕಾಂಗ್ರೆಸ್‌ಗೆ
![Two ex-BJP MLAs, ex-mayor join Congress](https://garudavoice.com/wp-content/uploads/2023/03/ex-mayor-join-Congress-3-e1678172792199.jpg)
ಇಬ್ಬರು ಬಿಜೆಪಿ ಮಾಜಿ ಶಾಸಕರು, ಮಾಜಿ ಮೇಯರ್ ಕಾಂಗ್ರೆಸ್‌ಗೆ
ಬೆಂಗಳೂರು: ಬಿಜೆಪಿಯ ಇಬ್ಬರು ಮಾಜಿ ಶಾಸಕರು ಹಾಗೂ ಮಾಜಿ ಮೇಯರ್ ಒಬ್ಬರು ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೊಳ್ಳೆಗಾಲ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಂಜುಂಡಸ್ವಾಮಿ ಮತ್ತು ವಿಜಯಪುರದ ಮಾಜಿ ಶಾಸಕ ಮನೋಹರ ಐನಾಪುರ ಅವರು ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇದೇ ಸಂದರ್ಭದಲ್ಲಿ ಮೈಸೂರು ಮಾಜಿ ಮೇಯರ್ ಪುರುಷೋತ್ತಮ ಕೂಡಾ ಕಾಂಗ್ರೆಸ್‌ಗೆ ತೆರಳಿದ್ದಾರೆ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಇರುವಂತೆ, ‘ಆಪರೇಷನ್ ಹಸ್ತ’ ನಡೆಸಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರ ಜೊತೆ ಎಲ್ಲರೂ ಕಾಂಗ್ರೆಸ್ ಸೇರಿದರು.
ಇವತ್ತು ಮಾಜಿ ಶಾಸಕರು ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹಾಲಿ ಶಾಸಕು ಪಕ್ಷ ಸೇರಲಿದ್ದು, ಅವರ ಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.