ನ್ಯಾಮತಿ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಅಪಘಾತ ಇಬ್ಬರಿಗೆ ಗಾಯ
ನ್ಯಾಮತಿ: ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕೆಎಸ್ಆರ್ಟಿಸಿ ಬಸ್ ವೊಂದು ಉರುಳಿ ಬಿದ್ದಿರುವ ಘಟನೆ ನ್ಯಾಮತಿ ತಾಲೂಕಿನ ಗೋವಿನಕೋವಿ ಗ್ರಾಮದ ಹರಳಹಳ್ಳಿ ಸೇತುವೆ ಕ್ರಾಸ್ ಬಳಿ ನಡೆದಿದೆ.
ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ನಡೆದ ಘಟನೆ ಇದಾಗಿದ್ದು, ಮೈಸೂರಿನಿಂದ ಹೊನ್ನಾಳಿ ಕಡೆಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.