ಯುಬಿಡಿಟಿ ಕಾಲೇಜಿನ ಎಂಟು ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ಯುಬಿಡಿಟಿ ಕಾಲೇಜಿ

ದಾವಣಗೆರೆ: ಇಲ್ಲಿನ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮದಲ್ಲಿ ಕಾಲೇಜಿನ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಎಂಟು ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಉದ್ಯಮವಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರಿಗೆ ಆಯ್ಕೆಯಾಗಿದ್ದಾರೆ.
ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಿಂದ ಒಟ್ಟು ಐದು ಮತ್ತು ಮೆಕ್ಯಾನಿಕಲ್ ವಿಭಾಗದಿಂದ ಎರಡು ಹಾಗೂ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದಿಂದ ಒಬ್ಬ ವಿದ್ಯಾರ್ಥಿ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ವಿಟಿಯು  ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ್, ಕುಲಸಚಿವ ಡಾ. ಬಿ.ಇ ರಂಗಸ್ವಾಮಿ, ಕಾಲೇಜಿನ ಪ್ರಾಚಾರ್ಯ ಡಾ. ಡಿ.ಪಿ ನಾಗರಾಜಪ್ಪ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಕಾಲೇಜಿನ ಉದ್ಯೋಗಾಧಿಕಾರಿಯಾದ ಡಾ. ರವೀಂದ್ರ ರಜಪೂತ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!