ಯುಜಿಸಿ ನೂತನ ಪರೀಕ್ಷಾ ಮಾರ್ಗಸೂಚಿ ಅನ್ವಯಿಸಲು ಒತ್ತಾಯಿಸಿ:ಎಐಡಿಎಸ್ಓ ಪ್ರತಿಭಟನೆ

ದಾವಣಗೆರೆ: ಯುಜಿಸಿ ನೀಡಿರುವ ನೂತನ ಪರೀಕ್ಷಾ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ, ರಾಜ್ಯದ ವಿಶ್ವವಿದ್ಯಾಲಯಗಳು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗಳು ಅನುಸರಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಹಾಗೂ ರಾಜ್ಯ ಮಟ್ಟದ ಡಿಪ್ಲೊಮಾ ವಿದ್ಯಾರ್ಥಿಗಳ ಹೋರಾಟ ಸಮಿತಿಯಿಂದ ಸೋಮವಾರ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಬಾಪೂಜಿ, ಡಿಆರ್‌ಆರ್, ಎಸ್‌ಜೆವಿಪಿ, ಜಿಪಿಟಿ, ಜೈನ್ ಮತ್ತು ಜಿಎಮ್‌ಐಟಿ ಈ ಎಲ್ಲಾ ಕಾಲೇಜಿನ ವಿದಾರ್ಥಿಗಳು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರ ಮಲ್ಲಪ್ಪ ಇವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಹಿಂದಿನ ಸೆಮಿಸ್ಟರ್ ಪರೀಕ್ಷೆ ರದ್ದಾಗಬೇಕು, ಎರಡು ಡೋಸ್ ಉಚಿತ ಲಸಿಕೆ ಆಗುವವರೆಗೂ ಆಫ್ ಲೈನ್ ತರಗತಿ/ಪರೀಕ್ಷೆ ನಡೆಯಬಾರದು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಅಂತಿಮ ಸೆಮಿಸ್ಟರ್ ಪರೀಕ್ಷೆಯನ್ನು ಮಾತ್ರ ಕಡ್ಡಾಯವಾಗಿ ನಡೆಸಬೇಕು, ಮಧ್ಯಂತರ ಅಥವಾ ವಾರ್ಷಿಕ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದು ಮಾಡಿ ಮತ್ತು ಆಂತರಿಕ ಮೌಲ್ಯಮಾಪನ ಅಥವಾ ಹಿಂದಿನ ಸೆಮಿಸ್ಟರ್  ಆಧಾರದ ಮೇಲೆ ಮೌಲ್ಯಮಾಪನ ಮಾಡಬೇಕು ಎಂದು ಯುಜಿಸಿ ಪರೀಕ್ಷೆಯ ಕುರಿತು ವೈಜ್ಞಾನಿಕ ಮಾರ್ಗಸೂಚಿಯನ್ನು ಹೊರಡಿಸಿದ್ದು ರಾಜ್ಯ ಸರ್ಕಾರ ಮತ್ತು ರಾಜ್ಯದ ವಿಶ್ವವಿದ್ಯಾಲಯಗಳು, ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಅನುಸರಿಸಬೇಕೆಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಕಾರ್ಯದರ್ಶಿ ಪೂಜಾ ನಂದಿಹಳ್ಳಿ, ಉಪಾಧ್ಯಕ್ಷ ಕಿರಣ್, ಜಂಟಿ ಕಾರ್ಯದರ್ಶಿ, ಸಂಘಟನಾ ಕಾರ್ಯದರ್ಶಿ ಪುಷ್ಪ, ಸ್ವಪ್ನ ಹಾಗು ವಿದಾರ್ಥಿಗಳಾದ ಅಭಿಲಾಷ್, ಸೂರಜ್, ತೇಜಶ್, ಗಿರೀಶ್, ಫೈಜಾನ್, ಸಂಜಯ್, ಗಗನ್ ಸೇರಿದಂತೆ ಇನ್ನು ಹಲವು ವಿದಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!