ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಾತ್ಯಾತೀತ ಜನತಾದಳದ ನೂತನ ಅಧ್ಯಕ್ಷರಾಗಿ UM ಮನ್ಸೂರ್ ಅಲಿ ಅಧಿಕಾರ ಸ್ವೀಕಾರ
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಾತ್ಯಾತೀತ ಜನತಾದಳದ ನೂತನ ಅಧ್ಯಕ್ಷರಾಗಿ ಇಂದು UM ಮನ್ಸೂರ್ ಅಲಿ ಇಂದು ಅಧಿಕಾರ ಸ್ವೀಕರಿಸಿದರು.
ಬಾಷಾ ನಗರದ ಮುಖ್ಯರಸ್ತೆಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಜಿಲ್ಲಾ ಮಹಾಪ್ರದಾನ ಕಾರ್ಯದರ್ಶಿ ಜೆ.ಅಮಾನುಲ್ಲಾಖಾನ್ರವರು ಅಧಿಕಾರ ಹಸ್ತಾಂತರ ಮಾಡಿ ದಕ್ಷಿಣ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಕಾರ್ಯಕರ್ತರನ್ನು ಪಕ್ಷದ ಸಿದ್ದಾಂತದಡಿಯಲ್ಲಿ ಬಲಪಡಿಸಿ ಪಕ್ಷವನ್ನು ಮುನ್ನಡೆಸಿಕೊಂಡು ಹೋಗುವಂತೆ ಕರೆನೀಡಿದರು.
ಪದಗ್ರಹಣ ಕಾರ್ಯಕ್ರಮದಲ್ಲಿ ಹರಿಹರದ ಮಾಜಿ ಶಾಸಕರಾದ ಶಿವಶಂಕರ್ ಜೆ.ಅಮಾನುಲ್ಲಾಖಾನ್ ಜಿಲ್ಲಾಧ್ಯಕ್ಷರಾದ ಬಿ. ಚಿದಾನಂದಪ್ಪ ರಾಜ್ಯ ಕಾರ್ಯದರ್ಶಿ ಟಿ. ಅಜ್ಗರ್ ಬೀಡಿ ರಾಜಸಾಬ್ ಬ್ಯಾಟರಿ ಜಬಿವುಲ್ಲಾ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಕಾರ್ಯಕರ್ತರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ಜಮೀರ್ ನಿರೂಪಿಸಿದರು.