UNICEF: ಮಕ್ಕಳ ಸಮಸ್ಯೆ ಕುರಿತು ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪತ್ರಕರ್ತರಿಗಾಗಿ ಕಾರ್ಯಾಗಾರ

UNICEF workshop for journalist on children's issue

ದಾವಣಗೆರೆ: (UNICEF) ಮೈಸೂರು ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ವತಿಯಿಂದ ಯುನಿಸೆಫ್ ಸಹಯೋಗದಲ್ಲಿ ಮಕ್ಕಳ ಸಮಸ್ಯೆಗಳ ಕುರಿತು ಕರ್ನಾಟಕ ರಾಜ್ಯ ಪತ್ರಕರ್ತರಿಗಾಗಿ ಡಿಸೆಂಬರ್ ೧೭ ಮತ್ತು ೧೮ರಂದು ಎರಡು ದಿನಗಳ ವೃತ್ತಿ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ.

ಕಾರ್ಯಾಗಾರವನ್ನು ಕುಲಪತಿ ಪ್ರೊ.ಬಿ.ಡಿ.ಕುಂಬಾರ ಉದ್ಘಾಟಿಸಿದರು. ಯುನಿಸೆಫ್ ಅಧಿಕಾರಿ ಪ್ರೋಸೂನ್ ಸೇನ್, ಕುಲಸಚಿವ ಪ್ರೊ.ಯು.ಎಸ್.ಮಹಾಬಲೇಶ್ವರ ಅತಿಥಿಗಳಾಗಿ ಭಾಗವಹಿಸುವರು. ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕಿ ಪ್ರೊ.ಎಂ.ಎಸ್.ಸಪ್ನಾ, ದಾವಣಗೆರೆ ವಿವಿ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕ ಪ್ರೊ.ಶಿವಕುಮಾರ ಕಣಸೋಗಿ ಉಪಸ್ಥಿತರಿರುವರು.

ಎರಡು ದಿನಗಳ ಕಾರ್ಯಾಗಾರದಲ್ಲಿ ಮಕ್ಕಳ ವಿವಿಧ ಸಮಸ್ಯೆಗಳ ಕುರಿತು ತಜ್ಞರು ಉಪನ್ಯಾಸ ನೀಡಲಿದ್ದಾರೆ. ಯುನಿಸೆಫ್ ಅಧಿಕಾರಿ ಪ್ರೋಸೂನ್ ಸೇನ್ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!