ಮೈಸೂರು :ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಅಬ್ಬರ ಪ್ರಚಾರದ ಭರಾಟೆ ಜೋರಾಗಿದೆ. ಈ ಮಧ್ಯೆ ಪ್ರಚಾರಕ್ಕೆ ತೆರಳುವ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಅಮಿತ್ ಶಾರಿಗೆ ಶಾಸಕ ಎಸ್.ಎ ರಾಮದಾಸ್ ಸೇರಿ ಹಲವು ಮುಖಂಡರು ಸಾಥ್ ನೀಡಿದರು.
#WATCH Union Home Minister Amit Shah offers prayers at Sri Chamundeshwari Temple in Karnataka's Mysuru pic.twitter.com/1Y8TCBmNvo
— ANI (@ANI) April 24, 2023
ಇಂದು ಅಮಿತ್ ಶಾ ಅವರು ಚಾಮರಾಜನಗರ ಹಾಸನ ಹುಬ್ಬಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ರೋಡ್ ಶೋ, ಪ್ರಚಾರ ನಡೆಸಲಿದ್ದಾರೆ.
