ಡಿ 11 ರಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ದಾವಣಗೆರೆ ಕಾರ್ಯಕ್ರಮದಲ್ಲಿ ಭಾಗಿ

ದಾವಣಗೆರೆ: ಕೇಂದ್ರ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಡಿ. 12 ರಂದು ದಾವಣಗೆರೆ ಜಿಲ್ಲೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವ ರಾಜೀವ್ ಚಂದ್ರಶೇಖರ್ ಅವರು ಡಿ. 12 ರಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, 10.30 ಗಂಟೆಗೆ ದಾವಣಗೆರೆ ನಗರಕ್ಕೆ ಆಗಮಿಸುವರು. ಬಳಿಕ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ‘ಡೆಪಾಸಿಟ್ ಇನ್ಸೂರೆನ್ಸ್ ಅಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ 2021 ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ವರ್ಚುಯಲ್ ಮೂಲಕ ನಡೆಯುವ ಈ ಕಾರ್ಯಕ್ರಮದಲ್ಲಿ ಸಚಿವ ರಾಜೀವ್ ಚಂದ್ರಶೇಖರ್ ಅವರು ಭಾಗವಹಿಸುವರು. ಸಚಿವರು ಅದೇ ದಿನ ಮಧ್ಯಾಹ್ನ 01 ಗಂಟೆಗೆ ಬೆಂಗಳೂರಿಗೆ ತೆರಳುವರು.