Unlock 4: ನಾಳೆಯಿಂದ ನೂತನ ಅನ್ ಲಾಕ್ ನಿಯಮ, ಏನಿರುತ್ತೆ, ಏನಿರಲ್ಲ, ವೀಕ್ಷಿಸಲು👇 ಕ್ಲಿಕ್ ಮಾಡಿ ಶೇರ್ ಮಾಡಿ

 

ದಾವಣಗೆರೆ: ರಾಜ್ಯದಲ್ಲಿ ಉನ್ನತ ಶಿಕ್ಷಣ ಪ್ರಾರಂಭಕ್ಕೆ ಸೇರಿದಂತೆ ಆ.02 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಕೊಡಗು ಜಿಲ್ಲೆ ಹೊರತು ಪಡಿಸಿ ಇಡೀ ರಾಜ್ಯದಲ್ಲಿ ಈ ಆದೇಶವು ಅನ್ವಯವಾಗಲಿದ್ದು, ಆ. 2 ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ. ಇದನ್ನು ಪರಿಣಾಮಕಾರಿಯಾಗಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಅಧಿಕಾರಿ ವರ್ಗದವರು ಜಾರಿಗೆ ತರಬೇಕೆಂದು ರಾಜ್ಯಸರ್ಕಾರ ಸೂಚಿಸಿದೆ.

*ಸಿನೆಮಾ ಹಾಲ್‌ಗಳು / ಮಲ್ಟಿಪ್ಲೆಕ್ಸ್‌ಗಳು / ಚಿತ್ರಮಂದಿರಗಳು / ರಂಗಮಂದಿರಗಳು / ಸಭಾಂಗಣಗಳು ಮತ್ತು ಅದರ ಆಸನ ಸಾಮರ್ಥ್ಯದ ಶೇ. 50 ರೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

*ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಕಾಲೇಜುಗಳು ಮತ್ತು ಸಂಸ್ಥೆಗಳು, ಜು. 26ರಿಂದ ಮರು ತೆರೆಯಲು ಅನುಮತಿ ನೀಡಲಾಗಿದೆ.

* ಕೋವಿಡ್ ಲಸಿಕೆಯ ಕನಿಷ್ಠ ಒಂದು ಡೋಸ್ ತೆಗೆದುಕೊಂಡ ವಿದ್ಯಾರ್ಥಿಗಳು, ಬೋಧನೆ ಮತ್ತು ಬೋಧಕೇತರ / ಇತರ ಸಿಬ್ಬಂದಿಗೆ ಮಾತ್ರ ಕಾಲೇಜುಗಳು / ಸಂಸ್ಥೆಗಳಿಗೆ ಹಾಜರಾಗಲು ಅನುಮತಿ ಇರುತ್ತದೆ. ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ.

*ದೀರ್ಘಾವಧಿಯ ತಾಂತ್ರಿಕ ಕೋರ್ಸ್‌ಗಳನ್ನು ಒಳಗೊಂಡಂತೆ ಎಲ್ಲಾ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ಕೋವಿಡ್ ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸಲು ಅನುಮತಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!