ದಾವಣಗೆರೆ

UPSC: ಯುಪಿಎಸ್ಸಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

Share
Share

ದಾವಣಗೆರೆ: (UPSC) ದಾವಣಗೆರೆ ನಗರದ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಂದಿರ ಆವರಣದಲ್ಲಿ ಎಸ್ ಎಸ್ ಕೇರ್ ಟ್ರಸ್ಟ್ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ನಡೆಯುತ್ತಿರುವ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ “ಸಂಕಲ್ಪ”ಕ್ಕೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಮೇ 24ರಂದು ನಡೆಯಲಿರುವ UPSC ಪ್ರೀಲಿಮ್ಸ್ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಅವರು, “UPSC ಪರೀಕ್ಷೆ ಕಠಿಣ ಹಾಗೂ ಅತ್ಯಂತ ಸ್ಪರ್ಧಾತ್ಮಕವಾದರೂ, ಸೇವೆಯ ಮನೋಭಾವವೇ ಯಶಸ್ಸಿನ ದಾರಿಗೆ ದೀಪವಾಗುತ್ತದೆ. ಅಂಕಗಳಿಗಿಂತ ಸಮಾಜಕ್ಕೆ ಕೊಡುಗೆ ನೀಡುವ ದೃಷ್ಟಿಕೋನವೇ ಶಾಶ್ವತ ಪ್ರೇರಣೆ” ಎಂದು ಹೇಳಿದರು.

ಪರೀಕ್ಷಾ ಸಮಯದಲ್ಲಿ ಆತ್ಮವಿಶ್ವಾಸ, ಶಾಂತಿ ಮತ್ತು ಸಮರ್ಪಕ ಸಿದ್ಧತೆಯ ಮೇಲೆ ನಂಬಿಕೆ ಇಡುವುದು ಅತ್ಯಗತ್ಯವೆಂದು ತಿಳಿಸಿದ ಅವರು, “ಹೆಚ್ಚಾಗಿ ಆಲೋಚಿಸದೆ, ನಿಮ್ಮ ಮೊದಲ ನಿರ್ಧಾರವನ್ನು ನಂಬಿ ವಿಶ್ವಾಸದೊಂದಿಗೆ ಪರೀಕ್ಷೆ ಬರೆಯಿರಿ” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಪ್ರೋತ್ಸಾಹಿಸಿದರು. ಈ ವೇಳೆ ಸಂಕಲ್ಪ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ರಾಜ್ಯ / ಕರ್ನಾಟಕ

DYSP: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಸರ್ಜರಿ: 74 ಡಿವೈಎಸ್‌ಪಿಗಳ ವರ್ಗಾವಣೆ – ಇಲ್ಲಿದೆ ಕಂಪ್ಲೀಟ್ ಲಿಸ್ಟ್

ಬೆಂಗಳೂರು:(DYSP) ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ವರ್ಗಾವಣೆ ಪ್ರಕ್ರಿಯೆ ನಡೆಸಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಕೂಡಲೇ ಜಾರಿಗೆ ಬರುವಂತೆ ಒಟ್ಟು 74 ಡಿವೈಎಸ್‌ಪಿ (ಸಿವಿಲ್) ಅಧಿಕಾರಿಗಳನ್ನು ವಿವಿಧ ಸ್ಥಳಗಳಿಗೆ ನಿಯೋಜಿಸಿ...

ದಾವಣಗೆರೆ

DCM: ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ: ಉದ್ಯಮಿ ಎನ್. ಬಕ್ಕೇಶ್ ಒತ್ತಾಯ

ದಾವಣಗೆರೆ:(DCM) ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಲಿಂಗಾಯತ ಸಮುದಾಯದ ಬೆಂಬಲ ಪ್ರಮುಖ ಕಾರಣವಾಗಿದ್ದು, ಮುಂಬರುವ ದಿನಗಳಲ್ಲಿ ಸಮುದಾಯದ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು...

Related Articles
ಅಪರಾಧದಾವಣಗೆರೆ

Robbery: ದಾವಣಗೆರೆಯಲ್ಲಿ ವ್ಯಾಪಾರಿ ಅಪಹರಿಸಿ 10 ಲಕ್ಷಕ್ಕೆ ಬೇಡಿಕೆ: ಕೃತ್ಯ ಎಸಗಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು

ದಾವಣಗೆರೆ: (Robbery)  ದಾವಣಗೆರೆಯಲ್ಲಿ ಬಟ್ಟೆ ವ್ಯಾಪಾರಿಯೊಬ್ಬರನ್ನು ಹಣಕಾಸಿನ ಮಾತುಕತೆ ನೆಪದಲ್ಲಿ ಕರೆದೊಯ್ದು, ಕೊಠಡಿಯೊಂದರಲ್ಲಿ ಬಂಧಿಸಿ 10...

ದಾವಣಗೆರೆರಾಜ್ಯ / ಕರ್ನಾಟಕ

IGP: ದಾವಣಗೆರೆ ಪೂರ್ವ ವಲಯ ಐಜಿಪಿಯಾಗಿ ಎನ್. ಸತೀಶ್ ಕುಮಾರ್ ವರ್ಗಾವಣೆ

ದಾವಣಗೆರೆ: (IGP) ಕರ್ನಾಟಕ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಂಡಿದ್ದು, ಹಿರಿಯ ಐಪಿಎಸ್ ಅಧಿಕಾರಿ...

ದಾವಣಗೆರೆರಾಜ್ಯ / ಕರ್ನಾಟಕ

Lokayukta SP: ದಾವಣಗೆರೆ ನೂತನ ಲೋಕಾಯುಕ್ತ ಎಸ್‌ಪಿಯಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ: ದೂರು ಸಲ್ಲಿಕೆಗೆ ಕರೆ

ದಾವಣಗೆರೆ: (Lokayukta SP) ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆ್ಯಂಟನಿ ಜಾನ್ ಜೆ.ಕೆ...