ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಸಿ. ಉಮಾಪತಿ, ಉಪಾಧ್ಯಕ್ಷರಾಗಿ ಟಿ.ಎಸ್. ಜಯರುದ್ರೇಶ್ ಆಯ್ಕೆ
ದಾವಣಗೆರೆ, ಫೆ. 28– ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷರಾಗಿ ಬಿ.ಸಿ. ಉಮಾಪತಿ, ಉಪಾಧ್ಯಕ್ಷರಾಗಿ ಟಿ.ಎಸ್. ಜಯರುದ್ರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬ್ಯಾಂಕಿನ ಸಭಾಂಗಣದಲ್ಲಿ ಶಿವಮೊಗ್ಗ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರೂ ಆಗಿರುವ ದಾವಣಗೆರೆ ಅರ್ಬನ್ ಕೋ – ಆಪರಟೇವ್ ಬ್ಯಾಂಕ್ ಚುನಾವಣಾಧಿಕಾರಿ ಎನ್.ಜಿ. ರುದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಸಂಜೆ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಬಿ.ಸಿ. ಉಮಾಪತಿ ಅವರ ಹೆಸರನ್ನು ನಿರ್ದೇಶಕ ಕೋಗುಂಡಿ ಬಕ್ಕೇಶಪ್ಪ ಸೂಚಿಸಿದರೆ, ನಿರ್ದೇಶಕ ಎಂ. ಚಂದ್ರಶೇಖರ್ ಅನುಮೋದಿಸಿದರು.
ಉಪಾಧ್ಯಕ್ಷ ಸ್ಥಾನಕ್ಕೆ ಟಿ.ಎಸ್. ಜಯರುದ್ರೇಶ್ ಅವರ ಹೆಸರನ್ನು ನಿರ್ದೇಶಕ ಕಂಚಿಕೇರಿ ಮಹೇಶ್ ಸೂಚಿಸಿದರೆ, ನಿರ್ದೇಶಕ ಅಜ್ಜಂಪುರ ಶೆಟ್ರು ವಿಜಯಕುಮಾರ್ ಅನುಮೋದಿಸಿದರು.
ಬ್ಯಾಂಕಿನ ನಿರ್ದೇಶಕರುಗಳಾದ ಅಂದನೂರು ಮುಪ್ಪಣ್ಣ, ಪಲ್ಲಾಗಟ್ಟಿ ಶಿವಾನಂದಪ್ಪ, ದೇವರಮನೆ ಶಿವಕುಮಾರ್, ಶ್ರೀಮತಿ ಸುರೇಖಾ ಎಂ. ಚಿಗಟೇರಿ, ಶ್ರೀಮತಿ ಅರ್ಚನ ಡಾ. ರುದ್ರಮುನಿ, ವಿ. ವಿಕ್ರಮ್, ಹೆಚ್.ಎಂ. ರುದ್ರಮುನಿಸ್ವಾಮಿ, ಸೋಗಿ ಮುರುಗೇಶ್, ಇ.ಎಂ. ಮಂಜುನಾಥ ಅವರುಗಳು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.