urdu school; ಚನ್ನಗಿರಿ ಶಾಸಕರಿಂದ ವಸತಿ ಸಚಿವರ ಭೇಟಿ

ಬೆಂಗಳೂರು, ಅ12: ಚನ್ನಗಿರಿ ತಾಲ್ಲೂಕಿನಲ್ಲಿ ಶಿಥಿಲಾವಸ್ಥೆಯಲ್ಲಿರುವ 25ಕ್ಕೂ ಹೆಚ್ಚು ಉರ್ದು ಶಾಲೆಗಳ (urdu school) ಅಭಿವೃದ್ಧಿಗೆ ಅನುದಾನ ನೀಡುವಂತೆ ಚನ್ನಗಿರಿ ಶಾಸಕ ಬಸವರಾಜು ವಿ ಶಿವಗಂಗಾ ಅವರು ವಸತಿ, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಜಡ್. ಜಮೀರ್ ಅಹಮದ್ ಖಾನ್ ಅವರಿಗೆ ಮನವಿ ಮಾಡಿದರು.

congress; ಸಚಿವ ಎಸ್.ಎಸ್.ಮಲ್ಲಿಕಾರ್ಜುನರ ಸಂಪರ್ಕಿಸಲು ಪ್ರಯತ್ನ ಪಟ್ಟರೂ ನನಗೆ ಸಿಗಲಿಲ್ಲ: ಜಿ.ಬಿ.ವಿನಯ್‌ಕುಮಾರ್

ಗ್ರಾಮೀಣ ಭಾರತದ ಸರ್ಕಾರಿ ಶಾಲೆಗಳು ಕೇವಲ ಪಠ್ಯ ಸಂಬಂಧಿ ಚಟುವಟಿಕೆಗಳಿಗೆ ಸೀಮಿತಗೊಳ್ಳದೇ ಪ್ರಾದೇಶಿಕ ಸಂಸ್ಕೃತಿ, ಪರಂಪರೆ ಹಾಗೂ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಬಲ್ಲ ಸಂಪರ್ಕ ಸೇತುವೆಗಳಾಗಿವೆ. ಶಿಕ್ಷಣ ಎಂಬುದು ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ. ಶಿಕ್ಷಣದಿಂದ ಜ್ಞಾನಾಧಾರಿತ ಸಮಾಜ ನಿರ್ಮಿಸಲು ಸಾಧ್ಯ. ಈ ನಿಟ್ಟಿನಲ್ಲಿ ಸಮುದಾಯ ಮತ್ತು ಶಾಲೆ ಮಕ್ಕಳ ಶಿಕ್ಷಣ ರಥದ ಎರಡು ಗಾಲಿಗಳು. ಗುಣಾತ್ಮಕ ಶಿಕ್ಷಣದಲ್ಲಿ ಸರ್ಕಾರ ಮತ್ತು ಸಮುದಾಯದ ಪಾತ್ರ ಬಹು ಮುಖ್ಯವಾದುದು. ಈ ನಿಟ್ಟಿನಲ್ಲಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ ಎಂದು ಶಾಸಕ ಬಸವರಾಜು ವಿ ಶಿವಗಂಗಾ ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!