ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ: ಹಕ್ಕಿ ಪಿಕ್ಕಿ ಬುಡಕಟ್ಟು ಸಂಘಟನೆ ಪ್ರತಿಭಟನೆ

ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ: ಹಕ್ಕಿ ಪಿಕ್ಕಿ ಬುಡಕಟ್ಟು ಸಂಘಟನೆ ಪ್ರತಿಭಟನೆ

ಚನ್ನಗಿರಿ: ಮಧ್ಯಪ್ರದೇಶದ ಸಿಂಧಿ ಜಿಲ್ಲೆಯಲ್ಲಿ ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಬಿಜೆಪಿ ಮುಖಂಡ ಪ್ರವೇಶ್ ಶುಕ್ಲ ಬಂಧನಕ್ಕೆ ಆಗ್ರಹಿಸಿ ಪಟ್ಟಣದಲ್ಲಿ ಹಕ್ಕಿಪಿಕ್ಕಿ ಬುಡಕಟ್ಟು ಯುವ ಸಂಘಟನೆ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ಬುಡಕಟ್ಟು ಜನಾಂಗದ ಯುವಕನ ಮೇಲೆ ಬಿಜೆಪಿ ಮುಖಂಡ ಪ್ರವೇಶ್ ಶುಕ್ಲ ಎಂಬುವವರು ಮೂತ್ರ ವಿಸರ್ಜನೆ ಮಾಡಿರುವುದು ಅಮಾನವೀಯ. ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆಯಾಗಿದೆ. ಇಷ್ಟೊಂದು ಕೀಳುಮಟ್ಟಕ್ಕೆ ಬಿಜೆಪಿ ಮುಖಂಡ ಇಳಿದಿರುವುದು ಖಂಡನೀಯ. ಪೊಲೀಸರು ಕೂಡಲೇ ಮುಖಂಡನನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಗಾಂಧಿ ವೃತ್ತದಲ್ಲಿ ಸಮಾರೋಪಗೊಂಡಿತು. ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ಗ್ರೇಡ್-2 ತಹಶೀಲ್ದಾರ್ ರುಕ್ಮಿಣಿ ಬಾಯಿ ಅವರಿಗೆ ಮನವಿ ಸಲ್ಲಿಸಿದರು.

ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ: ಹಕ್ಕಿ ಪಿಕ್ಕಿ ಬುಡಕಟ್ಟು ಸಂಘಟನೆ ಪ್ರತಿಭಟನೆ
ಈ ಸಂಧರ್ಭದಲ್ಲಿ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘಟನೆ ರಾಜ್ಯಾಧ್ಯಕ್ಷ ಪುನೀತ್ ಕುಮಾರ್ ಆರ್ , ನಾಯಕ ಸಮಾಜ ಯುವ ನಾಯಕ ಬಸವಪುರ ರಂಗನಾಥ್, ಕುಬೇಂದ್ರ ಸ್ವಾಮಿ, ಶಿವಮೊಗ್ಗ ಜಿಲ್ಲಾಧ್ಯಕ್ಷ ಲೇಸಪ್ಪ, ಕಾರ್ಯದರ್ಶಿ ನಂದಕುಮಾರ,  ಬಿನೋದ್ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!