utsava; ಭಗವಾನ್ ಶ್ರೀ ಜೀಹ್ವೇಶ್ವರ ಸ್ವಾಮಿ ಜಯಂತ್ಯುತ್ಸವ ನಾಳೆ

ದಾವಣಗೆರೆ, ಆ.28: ಸ್ವಕುಳ ಸಾಳಿ ನೇಕಾರ ಸಮಾಜದಿಂದ ಭಗವಾನ್ ಶ್ರೀ ಜೀಹ್ವೇಶ್ವರ ಸ್ವಾಮಿ ಜಯಂತ್ಯುತ್ಸವ (utsava) ಕಾರ್ಯಕ್ರಮವು ಆ.29 ರಂದು ನಗರದ ಗುಂಡಿ ಮಹಾದೇವಪ್ಪ ಕಲ್ಯಾಣಮಂಟಪದಲ್ಲಿ ನಡೆಯಲಿದೆ.
ಶ್ರೀ ಜಡೇಸಿದ್ದ ಶಿವಯೋಗಿಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಅಂದು ಬೆಳಿಗ್ಗೆ 10:30 ಕ್ಕೆ ಜರುಗುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವಕುಳಸಾಳಿ ಸಮಾಜದ ಅಧ್ಯಕ್ಷ ಮೋಹನ್ ಪಿ. ಗಾಯಕವಾಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೇಯರ್ ವಿನಾಯಕ ಪೈಲ್ವಾನ್, ದೂಡಾ ಮಾಜಿ ಅಧ್ಯಕ್ಷ ಮಾಲತೇಶರಾವ್ ಜಾಧವ್ , ಮಾಜಿ ಮೇಯರ್ ಅನಿತಾಬಾಯಿ ಜಾಧವ್, ನೀಲಕಂಠ ರೋಖಡೆ, ಧೀರೇಂದ್ರ ಏಕಬೋಟೆ, ಬಸವರಾಜ್ ಗುಬ್ಬಿ, ಜಿಲ್ಲಾ ನೇಕಾರ ವೇದಿಕೆಯ ಅಧ್ಯಕ್ಷ ಎಲ್. ಸತ್ಯನಾರಾಯಣ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಮಾಜಿ ಸಂಸದ ಕೆ.ಸಿ. ಕೊಂಡಯ್ಯ, ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸನ್ಮಾನಿಸಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಮಾಡಲಾಗುವುದು