ಎವಿಕೆ ಕಾಲೇಜು ವಿದ್ಯಾರ್ಥಿನಿಯರಿಗೆ ಲಸಿಕೆ

ದಾವಣಗೆರೆ.ಜು.೨; ಎ.ವಿ.ಕೆ. ಮಹಿಳಾ ಕಾಲೇಜಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ಲಸಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳು ಡಾ. ಶಾಮನೂರು ಶಿವಶಂಕರಪ್ಪನವರು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. 430 ವಿದ್ಯಾರ್ಥಿಗಳು ಹಾಗೂ ಸಿಬ್ಬಂಧಿ ವರ್ಗಕ್ಕೆ ಲಸಿಕೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಬಾಪೂಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಅಥಣಿ ವೀರಣ್ಣನವರು, ಶೈಕ್ಷಣಿಕ ನಿರ್ದೇಶಕರಾದ ಡಾ. ಎಂ.ಜಿ. ಈಶ್ವರಪ್ಪನವರು, ಪ್ರೊ. ಸಿ.ಹೆಚ್. ಮುರಿಗೇಂದ್ರಪ್ಪನವರು, ದಿನೇಶ್‌ಶೆಟ್ಟಿಯವರು, ಪ್ರಾಚಾರ್ಯರಾದ ಡಾ. ಬಿ.ಪಿ. ಕುಮಾರ್ ಹಾಗೂ ಅಧ್ಯಾಪಕೇತರರು ಪಾಲ್ಗೊಂಡಿದ್ದರು.