ಹಾವೇರಿ ನಾಗೇಂದ್ರಮಟ್ಟಿ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಜ 13 ರಂದು ವೈಕುಂಠ ಏಕಾದಶಿ

ಹಾವೇರಿ : ಇಲ್ಲಿನ ನಾಗೇಂದ್ರಮಟ್ಟಿಯ 8ನೇ ಕ್ರಾಸಿನಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಕಾರ್ಯಕ್ರಮ ದಿ,13 ರಂದು ಜರುಗಲಿದೆ.
ಬೆಳಿಗ್ಗೆ 7 ಘಂಟೆಗೆ ಗರ್ಭಗುಡಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಗೆ ಪೂಜೆ.8 ಘಂಟೆಗೆ ಉತ್ಸವ ಮೂರ್ತಿಯ ಪ್ರದಕ್ಷಿಣೆ.9 ಘಂಟೆಗೆ ಸ್ವಾಮಿಯ ಉತ್ಸವ ಮೂರ್ತಿಯನ್ನು ಸ್ಥಾಪಿಸುವುದು.ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9 ಘಂಟೆಯವರಿಗೆ ದೇವರ ದರ್ಶನ ಹಾಗೂ ಲಡ್ಡು ಪ್ರಸಾದ ವಿತರಣೆ ಮಾಡುವ ಕಾರ್ಯಕ್ರಮಗಳು ಜರುಗಲಿವೆ. ಈ ಕಾರ್ಯಕ್ರಮಗಳಲ್ಲಿ ಸಮಸ್ತ ಭಕ್ತರು ಭಾಗವಹಿಸಿ ಶ್ರೀ ವೆಂಕಟೇಶ್ವರ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಹಾಗೂ ಪ್ರತಿಯೊಬ್ಬರು ಮಾಸ್ಕ್ ಹಾಗೂ ಸಮಾಜಿಕ ಅಂತರ ಕಾಪಾಡಿರಿ ಎಂದು ಶ್ರೀ ವೆಂಕಟೇಶ್ವರ ದೇವಸ್ಥಾನ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!