KSRTCಯಲ್ಲಿ ವನಿತಾ ಯುಗ: ಅರ್ಥಪೂರ್ಣ ಮಹಿಳಾ ದಿನ

KSRTCಯಲ್ಲಿ ವನಿತಾ ಯುಗ: ಅರ್ಥಪೂರ್ಣ ಮಹಿಳಾ ದಿನ

ಬೆಂಗಳೂರು: ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಇಂದು ನಿಗಮದ ಕೇಂದ್ರ ಕಚೇರಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2023 ನ್ನು ವಿ.ಅನ್ಬುಕುಮಾರ್ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರವರ ಅಧ್ಯಕ್ಷತೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ನಾರಿ ಶಕ್ತಿ ಪ್ರಶಸ್ತಿ ಪುರಸ್ಕೃತ ಶೋಭಾ ಗಸ್ತಿ ರವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸಾಮಾಜಿಕ ಕಾಳಜಿ, ದೇವದಾಸಿ ಪದ್ಧತಿ ನಿರ್ಮೂಲನೆಗಾಗಿ ಶ್ರೀಮತಿ ಶೋಭಾರವರು ತಮ್ಮನ್ನು ತೊಡಗಿಸಿಕೊಂಡಿದ್ದು ಮಹಿಳಾ ಸಬಲೀಕರಣಕ್ಕಾಗಿ ಶ್ರಮಿಸಿರುವುದನ್ನು ಸ್ಮರಿಸಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರವರು ಸಮಾಜದಲ್ಲಿರುವ ದೇವದಾಸಿ ಕರಾಳ ಪದ್ಧತಿಯ ವಿರುದ್ಧ ಹೋರಾಡುತ್ತಿರುವ ಇವರು ನಮ್ಮ ನಿಗಮದ ಕಾರ್ಯಕ್ರಮಕ್ಕೆ ಆಗಮಿಸಿ ನಮ್ಮ ಮಹಿಳಾ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿ ಪ್ರೇರಣೆ ತುಂಬಿದ್ದಾರೆ. ಮಹಿಳೆಯರಿಗೆ ಶಿಕ್ಷಣವೇ ಆಸ್ತಿ ಮತ್ತು ಶಕ್ತಿ ಎಂದರು.


ಈ ಸಂದರ್ಭದಲ್ಲಿ ನಿಗಮದ ವತಿಯಿಂದ ಶ್ರೀಮತಿ ಶೋಭಾ ಗಸ್ತಿರವರಿಗೆ ನೆನಪಿನ‌ ಕಾಣಿಕೆ, ರೂ.20,000 ಗೌರವ ಧನದ ಚೆಕ್ಕನ್ನು ನೀಡಿ ಗೌರವಿಸಲಾಯಿತು.
ನಿಗಮದ ವಿವಿಧ ಹುದ್ದೆಗಳಲ್ಲಿ ಒಟ್ಟಾರೆ 2821 ಮಹಿಳಾ ಉದ್ಯೋಗಿಗಳು, ಪುರುಷ ಕಾರ್ಮಿಕರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದು, ನಿಗಮವು ಎಲ್ಲಾ ರೀತಿಯಲ್ಲಿಯೂ ಅವರನ್ನು ಗೌರವಿಸಿ ಪ್ರೋತ್ಸಾಹಿಸುತ್ತಿರುವ ಮತ್ತು ಅವರ ಕಲ್ಯಾಣಕ್ಕಾಗಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಕುರಿತು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದರು.


ಶ್ರೀಮತಿ ಶೋಭಾ ಗಸ್ತಿ ರವರು ಮಾತನಾಡಿ, ಹೆಣ್ಣು ಮಕ್ಕಳಿಗೆ ಶಿಕ್ಷಣ ಅಗತ್ಯ, ಸರ್ಕಾರಗಳು ಹತ್ತು‌ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ನಮ್ಮಂತಹ ಅನೇಕರಿಗೆ ದೇವದಾಸಿ ಪದ್ಧತಿಯಿಂದ ಹೊರಬರಲು ಸಹಾಯ ಮಾಡುತ್ತಿವೆ. ಸಮಾಜವು‌ ಕೂಡ ಹೆಣ್ಣುಮಕ್ಕಳನ್ನು ಗೌರವಿಸಬೇಕು. 1994 ರಿಂದ ತಾವು ಈ ಪದ್ಧತಿಯ ವಿರುದ್ಧ ಹೋರಾಡುತ್ತಾ ನಮ್ಮ‌ ಹೆಣ್ಣುಮಕ್ಕಳಿಗೆ ಸಮಾಜದಲ್ಲಿ ಎಲ್ಲರಂತೆ ಬದುಕಲು ಮಾರ್ಗದರ್ಶನ, ಧೈರ್ಯ ,ಹಾಗೂ ಸಹಕಾರ ನೀಡುತ್ತಿದ್ದೇನೆ. ಬೆಳಗಾವಿಯಿಂದ ನನ್ನನ್ನು ಇಲ್ಲಿಗೆ ಆಹ್ವಾನಿಸಿ, ಗೌರವಿಸಿದ್ದು ನಮ್ಮಂತಹ ಹಲವರಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಸಾರಿಗೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗಳು ಸಹ ಅಭಿನಂದನಾರ್ಹರು ಎಂದು ತಿಳಿಸಿದರು.


ಇಂದು ನಿಗಮದ 17 ವಿಭಾಗಗಳಲ್ಲಿ ಉತ್ತಮ ಕಾರ್ಯ ಸಾಧನೆ ತೋರಿದ ನಿರ್ವಾಹಕಿಯರು, ತಾಂತ್ರಿಕ ಸಿಬ್ಬಂದಿಗಳು ಹಾಗೂ ಭದ್ರತಾ ಸಿಬ್ಬಂದಿಗಳ ಪೈಕಿ ಒಟ್ಟು 42 ಮಹಿಳಾ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶ್ರೀ.ಪ್ರಶಾಂತ್ ಕುಮಾರ್ ಮಿಶ್ರ ಭಾಆಸೇ, ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ಹಾಗೂ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು

Leave a Reply

Your email address will not be published. Required fields are marked *

error: Content is protected !!