application; ವಿವಿಧ ನಿಗಮಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಡಿ ಆರ್ ಆರ್ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

ದಾವಣಗೆರೆ, ಅ.9: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ನಲ್ಲಿ ಅರ್ಜಿ (Application) ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಸಾತ್ವಿಕ ತಿಳಿಸಿದ್ದಾರೆ.

**

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ.  ಜಿಲ್ಲಾ ವ್ಯವಸ್ಥಾಪಕರು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸಬಹುದು.

**

ಕರ್ನಾಟಕ ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮ
ಕರ್ನಾಟಕ ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸಬಹುದು.

Leave a Reply

Your email address will not be published. Required fields are marked *

error: Content is protected !!