ಕೊವಿಡ್ ಮುಂಜಾಗೃತಾ ಕ್ರಮ ಕೈಗೊಂಡು ವಿಧಾನಮಂಡಲ,ವಿಧಾನಸಭೆ, ಸಮಿತಿಗಳ ಸಭೆ ನಡೆಸಲು ಅನುಮತಿ

ದಾವಣಗೆರೆ: ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ರಾಜ್ಯ ವಿಧಾನಮಂಡಲ, ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆಗಳನ್ನು ಇದೇ 28 ರಿಂದ ಪ್ರಾರಂಭಿಸಲು ಸರ್ಕಾರ ತೀರ್ಮಾನಿಸಿದೆ‌.

ಕರೋನಾ ಎರಡನೇ ಅಲೆಯು ದೇಶದಲ್ಲಿ ಮತ್ತು ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದ್ದ ಹಿನ್ನೆಲೆಯಲ್ಲಿ ಸದಸ್ಯರುಗಳ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಸಮಿತಿ ಸಭೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಕೊರೋನ ಸೋಂಕು ಇಳಿಕೆಯಾಗಿರುವುದರಿಂದ ಹಾಗೂ ಲಾಕ್‌ಡೌನ್ ಸಡಿಲಗೊಂಡಿರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು , ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಿ ಕರ್ನಾಟಕ ವಿಧಾನಮಂಡಲ, ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆಗಳನ್ನು ನಡೆಸಲು ಉಭಯ ಸಭಾಧ್ಯಕ್ಷರು ಅನುಮತಿಸಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.‌ವಿಶಾಲಾಕ್ಷಿ ತಿಳಿಸಿದ್ದಾರೆ.

ಎಲ್ಲಾ ಸಮಿತಿಗಳು ಮುಂದಿನ ಆದೇಶದವರೆಗೆ ರಾಜ್ಯದೊಳಗೆ ಅಥವಾ ಹೊರ ರಾಜ್ಯಗಳಲ್ಲಿ ಯಾವುದೇ ಅಧ್ಯಯನ, ಪ್ರವಾಸ ಹಾಗೂ ಸ್ಥಳೀಯವಾಗಿ ಯಾವುದೇ ಪರಿಶೀಲನೆ ಕೈಗೊಳ್ಳಬಾರದೆಂದು ಉಭಯ ಸಭಾಧ್ಯಕ್ಷರು ಆದೇಶಿಸಿರುವುದಾಗಿ ಅವರು ಸದಸ್ಯರುಗಳಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!