ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ಉತ್ತಮ ನಡತೆ ರೂಢಿಸಿಕೊಳ್ಳುವುದು ಅತ್ಯಗತ್ಯ – ತೇಜಸ್ವಿ ಕಟ್ಟೀಮನಿ
ದಾವಣಗೆರೆ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅವಧಿಯಲ್ಲಿ ಆತ್ಮವಿಶ್ವಾಸ ಮತ್ತು ಉತ್ತಮ ನಡವಳಿಕೆ ಮತ್ತು ವರ್ತನೆಯನ್ನು ರೂಡಿಸಿಕೊಳ್ಳುವುದು ಅತ್ಯಗತ್ಯ ಎಂದು ಜಿಎಂಐಟಿ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಹರಿಹರ ನಗರದ ಎಸ್ ಜೆ ವಿ ಪಿ ಪಾಲಿಟೆಕ್ನಿಕ್ ನಲ್ಲಿ ನಡೆದ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಿಕೆ ಪತ್ರ ಮತ್ತು ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ನೀಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಜಿಎಂಐಟಿ ಸಹಾಯದಿಂದ ಹರಿಹರದ ಎಸ್ ಜೆ ವಿ ಪಿ ಪಾಲಿಟೆಕ್ನಿಕ್ ತಾಂತ್ರಿಕ ವಿದ್ಯಾರ್ಥಿಗಳಿಗೆ ಹಲವು ಕಂಪನಿಗಳ ಸಂದರ್ಶನಕ್ಕೆ ಅವಕಾಶವನ್ನು ಮಾಡಿಕೊಡಲಾಗಿತ್ತು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಶ್ರೀ ನಂದೀಶ್ ಮಾತನಾಡಿ, ಜಿಎಂಐಟಿ ತಾಂತ್ರಿಕ ಮಹಾವಿದ್ಯಾಲಯದ ಸಹಾಯದಿಂದ ಇಂದು ಹಲವು ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆತಿದ್ದು, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಿಗೆ ಮತ್ತು ಜಿಎಂಐಟಿ ಕಾಲೇಜಿಗೆ ಧನ್ಯವಾದವನ್ನು ಅರ್ಪಿಸಿದರು.
ಇದೇ ವೇಳೆ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಇವರಿಗೆ ಸನ್ಮಾನ ಮಾಡುವುದರ ಮೂಲಕ ತಮ್ಮ ಗೌರವವನ್ನು ಸೂಚಿಸಿದರು.
ಕಾರ್ಯಕ್ರಮದಲ್ಲಿ ಎಸ್ ಜೆ ವಿ ಪಿ ಪಾಲಿಟೆಕ್ನಿಕ್ ಕಾಲೇಜಿನ ಅಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡು ಯಶಸ್ವಿಗೊಳಿಸಿದರು.