ಲೋಕಲ್ ಸುದ್ದಿ

ಮತಯಂತ್ರಗಳನ್ನು ಧ್ವಂಸ ಮಾಡಿದ ಗ್ರಾಮಸ್ಥರು: 20 ಕ್ಕೂ ಹೆಚ್ಚು ಜನರ ಬಂಧನ

ಮತಯಂತ್ರಗಳನ್ನು ಧ್ವಂಸ ಮಾಡಿದ ಗ್ರಾಮಸ್ಥರು: 20 ಕ್ಕೂ ಹೆಚ್ಚು ಜನರ ಬಂಧನ

ವಿಜಯಪುರ : ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಮತಯಂತ್ರಗಳನ್ನು ಒಡೆದು ಪುಡಿ ಪುಡಿ ಮಾಡಿದ ಘಟನೆ ಇಂದು ನಡೆದಿದೆ.

ಕಾಯ್ದಿರಿಸಲಾಗಿದ್ದ ಮತಯಂತ್ರಗಳನ್ನು ಮಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಮತದಾನ ಕಾರ್ಯವನ್ನು ಅರ್ಧಕ್ಕೆ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗುತ್ತಿದೆ ಎಂದು ತಪ್ಪು ಭಾವಿಸಿ ಮತ ಯಂತ್ರ ಒಡೆದು ಹಾಕಿದ ಗ್ರಾಮಸ್ಥರು ಇವಿಎಂ ಮಶೀನ್ ಹಾಗೂ ವಿವಿಪ್ಯಾಟ್ ಮಶೀನ್‌ಗಳನ್ನ ಒಡೆದು ಹಾಕಿದ್ದಾರೆ. ಇದೇ ವೇಳೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರಲ್ಲದೇ, ಸಿಬ್ಬಂದಿಗಳ ಮೇಲೂ ಹಲ್ಲೆ ಮಾಡಿದ್ದಾರೆ.

ಮತಯಂತ್ರ ಕೆಟ್ಟಲ್ಲಿ ಬಳಕೆ ಮಾಡಲು ರಿಸರ್ವ್ ಇಡಲಾಗಿದ್ದ ಇವಿಎಂ, ವಿವಿಪ್ಯಾಟ್ ‌ಮಶೀನ್‌ಗಳು ವಾಪಸ್ ತರುವುದನ್ನ ಗಮನಿಸಿ ಸಿಬ್ಬಂದಿಗಳನ್ನು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಸಿಬ್ಬಂದಿಗಳು ಸರಿಯಾಗಿ ಉತ್ತರಿಸದೇ ಇದ್ದಾಗ ಗ್ರಾಮಸ್ಥರು ಅನುಮಾನಗೊಂಡು ಯಂತ್ರಗಳನ್ನು ಧ್ವಂಸ ಮಾಡಿದ್ದಾರೆ. ಸದ್ಯ ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ, ಮತದಾನ ಸ್ಥಗಿತವಾಗಿತ್ತು. ಸ್ಥಳಕ್ಕೆ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Most Popular

To Top