ರಾಷ್ಟ್ರೀಯ ಗೌರವ ಅವಮಾನ ತಡೆ ಕಾಯಿದೆ ಹಾಗೂ ಭಾರತೀಯ ದಂಡ ಸಂಹಿತೆಯ ಉಲ್ಲಂಘನೆ.! ಸಚಿವ ಈಶ್ವರಪ್ಪ ವಜಾಕ್ಕೆ ಆಗ್ರಹಿಸಿದ ಸಿದ್ದರಾಮಯ್ಯ

ಬೆಂಗಳೂರು: ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜದ ಬದಲು ಕೇಸರಿ ಧ್ವಜ ಹಾರಿಸಲಾಗುವುದು ಎಂಬ ಸಚಿವರ ಹೇಳಿಕೆಯು 1971ರ ರಾಷ್ಟ್ರೀಯ ಗೌರವ ಅವಮಾನ ತಡೆ ಕಾಯಿದೆ ಹಾಗೂ ಭಾರತೀಯ ದಂಡ ಸಂಹಿತೆಯ ಉಲ್ಲಂಘನೆಯಾಗಿದ್ದು, ಕೂಡಲೇ ಗ್ರಾಮೀಣಾಭಿವೃದ್ಧಿ ಸಚಿವರಾದ ಈಶ್ವರಪ್ಪ ಅವರನ್ನು ವಜಾಗೊಳಿಸಿ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದರು.
ಬುಧವಾರ ವಿಧಾನಸಭೆಯ ಕಲಾಪದಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಹೇಳಿಕೆ ನೀಡಿ ಆರು ದಿನಗಳಾಗಿವೆ. ಈಗಾಗಲೇ ಮುಖ್ಯಮಂತ್ರಿಗಳು ಸ್ವಯಂ ಪ್ರೇರಿತರಾಗಿ ಕ್ರಮ ಕೈಗೊಂಡು ಅವರನ್ನು ವಜಾ ಮಾಡಬೇಕಿತ್ತು ಎಂದು ಅಭಿಪ್ರಾಯಪಟ್ಟರು.
ನಂತರ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿAದ ವಜಾಗೊಳಿಸುವಂತೆ ಕಾಂಗ್ರೆಸ್ ಪಕ್ಷ ಒತ್ತಾಯಿಸುತ್ತಿದ್ದಂತೆ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಕೆ.ಪಿ.ಎಸ್.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಡುವೆ ವಾದ-ವಿವಾದ ನಡೆಯಿತು. ಅದಾಗ್ಯು ಆಡಳಿತ ಪಕ್ಷದ ನಾಯಕರು ಸಚಿವರಾದ ಈಶ್ವರಪ್ಪ ಅವರನ್ನು ವಹಿಸಿಕೊಂಡು ಮಾತನಾಡಿದ್ದರಿಂದ ಗದ್ದಲ ಉಂಟಾಯಿತು.
ಕಾನೂನು ಮತ್ತು ಸಂಸದೀಯ ಸಚಿವರಾದ ಜೆಸಿ ಮಾಧುಸ್ವಾಮಿ ಮಾತನಾಡಿ, ಈಶ್ವರಪ್ಪ ಅವರು ಕೆಂಪುಕೋಟೆಯಲ್ಲಿ ಕೇಸರಿ ಧ್ವಜಾರೋಹಣ ಮಾಡುವುದಾಗಿ ಹೇಳಿರುವುದು ಮಾಧ್ಯಮ ಸಂವಾದದ ಭಾಗವಾಗಿದೆ. ಆದ್ದರಿಂದ ಈ ಹೇಳಿಕೆಯನ್ನು ಹೇಳಿಕೆಯಾಗಿ ಅರ್ಥೈಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿದರು.
ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಮುಂದೂಡಿಕೆ ಮಂಡನೆಗೆ ಅವಕಾಶ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವ ಮುನ್ನ ಈಶ್ವರಪ್ಪ ಅವರಿಗೆ ಮಾತನಾಡಲು ಅವಕಾಶ ನೀಡಬೇಕು ಎಂದು ತಿಳಿಸಿದರು.
ಇದಕ್ಕೆ ಕಾಂಗ್ರೆಸ್ ಮುಖಂಡರು ಸರ್ಕಾರ ಮೊದಲು ಅಧಿಕೃತ ಪ್ರತಿಕ್ರಿಯೆ ನೀಡಬೇಕೆಂದು ಒತ್ತಾಯಿಸಿ ರಾಷ್ಟçಧ್ವಜ ಹಿಡಿದು ಪ್ರತಿಭಟಿಸಿದರು. ಇದನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಖಂಡಿಸಿ ಸದನವನ್ನು ಮುಂದೂಡಿದರು ಸಹ ಸದನದಿಂದ ಹೊರಡುವ ಮೊದಲು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಈ ವಿಷಯವಾಗಿ ಮಾತಿನ ಚಕಮಕಿ ನಡೆಯಿತು. ಇದನ್ನು ತಿಳಿಗೊಳಿಸಲು ಮಾರ್ಷಲ್‌ಗಳೂ ಮಧ್ಯ ಪ್ರವೇಶಿಸಬೇಕಾದ ಅನಿವಾರ್ಯತೆ ಎದುರಾಯಿತು.