ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ : ಜಗಳೂರಿನಲ್ಲಿ 30 ಪ್ರಕರಣ ದಾಖಲು
ದಾವಣಗೆರೆ: ಜಗಳೂರು ಪಟ್ಟಣದಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದ 30 ಅಂಗಡಿಗಳ ಮೇಲೆ ಪ್ರಕರಣ ದಾಖಲಿಸಿ ದಂಡ ರೂಪವಾಗಿ ರೂ.3,380 ಸಂಗ್ರಹಿಸಲಾಗಿದೆ.
ಶುಕ್ರವಾರ ಮುಂಜಾನೆ ಜಗಳೂರು ನಗರದ ವಿವಿಧ ಹೋಟೆಲ್, ಬೇಕರಿ, ರೆಸ್ಟೋರೆಂಟ್‍ಗಳ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಕೋಟ್ಪಾ ಕಾಯ್ದೆ-2003 ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ ದಂಡ ವಿಧಿಸಿ ನಿಯಮ ಪಾಲನೆ ಕುರಿತಂತೆ ಮಾರ್ಗದರ್ಶನ ಮಾಡಿದರು. ನಿಯಮ 04ರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧ ಎಂಬ ಫಲಕ ಹಾಕುವಂತೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ.ಲೋಕೇಶ ಅವರ ಮಾರ್ಗದರ್ಶನದಲ್ಲಿ ತಾಲ್ಲೂಕು ಆರೋಗ್ಯಧಿಕಾರಿ ಡಾ||ನಾಗರಾಜ, ಎನ್‍ಟಿಸಿಪಿ ಸಮಾಜ ಕಾರ್ಯಕರ್ತ ದೇವರಾಜ್.ಕೆ.ಪಿ, ಮುಖ್ಯಧಿಕಾರಿ ಲೋಕ್ಯನಾಯ್ಕ, ಪಟ್ಟಣ ಪಂಚಾಯತ್ ಬಿಪಾಯತ್, ಆರೋಗ್ಯ ನಿರೀಕ್ಷಣಾಧಿಕಾರಿ ಸೋಮಶೇಖರ್, ಪಟ್ಟಣ ಪಂಚಾಯತ್ ಪರುಶುರಾಮಪ್ಪ, ಪೊಲೀಸ್ ಸಿಬ್ಬಂದಿಗಳಾದ ಚಾಮರಾಜ್ ರೆಡ್ಡಿ ಹಾಗೂ ಇತರರು ದಾಳಿಯಲ್ಲಿ ಪಾಲ್ಗೊಂಡಿದ್ದರು.