ಸಂಚಾರಿ ನಿಯಮ ಉಲ್ಲಂಘನೆ: ಶೇ.50 ರಿಯಾಯಿತಿ ದಂಡ ಪಾವತಿಗೆ ಮತ್ತೊಮ್ಮೆ ಅವಕಾಶ

ಸಂಚಾರಿ ನಿಯಮ ಉಲ್ಲಂಘನೆ: ಶೇ.50 ರಿಯಾಯಿತಿ ದಂಡ ಪಾವತಿಗೆ ಮತ್ತೊಮ್ಮೆ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಬಾಕಿ ದಂಡ ಪಾವತಿಗೆ ಮತ್ತೆ ಶೇ. 50ರಷ್ಟು ರಿಯಾಯಿತಿ ಘೋಷಣೆ ಮಾಡಿದೆ.
ಈ ಹಿಂದೆಯೂ 2 ಬಾರಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ನೀಡಿತ್ತು. ನಂತರ ರಾಜ್ಯ ವಿಧಾನಸಭೆ ಘೋಷಣೆಯಾಗಿದ್ದು, ರಿಯಾಯಿತಿ ದರದ ದಂಡ ಪಾವತಿ ಅವಕಾಶ ಸ್ಥಗಿತಗೊಂಡಿತ್ತು.

ಸಂಚಾರಿ ನಿಯಮ ಉಲ್ಲಂಘನೆ: ಶೇ.50 ರಿಯಾಯಿತಿ ದಂಡ ಪಾವತಿಗೆ ಮತ್ತೊಮ್ಮೆ ಅವಕಾಶ
ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ರಿಯಾಯಿತಿ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 9 ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ. 50 ರಷ್ಟು ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ಸಾರಿಗೆ ಇಲಾಖೆ ಬುಧವಾರ ಆದೇಶ ಹೊರಡಿಸಿದೆ. ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!