ವಿಪ ಸದಸ್ಯ ವೈ.ಎ. ನಾರಾಯಣಸ್ವಾಮಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ನೀಡುವಂತೆ ಅಭಿಮಾನಿ ಬಳಗದಿಂದ ಒತ್ತಾಯ

IMG-20210805-WA0016

ದಾವಣಗೆರೆ: ವಿಧಾನ ಪರಿಷತ್ ಸದಸ್ಯ ಡಾ|| ವೈ.ಎ.ನಾರಾಯಣಸ್ವಾಮಿ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸ್ಥಾನ ನೀಡಬೇಕೆಂದು ಡಾ|| ವೈ.ಎ.ಎನ್ ಬಳಗ ಆಗ್ರಹಿಸಿದೆ.

ಡಾ|| ವೈ.ಎ.ನಾರಾಯಣಸ್ವಾಮಿ ಅವರು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದಿಂದ ಒಂದುಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಉತ್ತಮವಾದ ಸೇವೆಯನ್ನು ಸಲ್ಲಿಸಿದ್ದಾರೆ. ಐದೂ ಜಿಲ್ಲೆಗಳಲ್ಲಿ ಬರುವ ಪ್ರತಿ ಶಾಲಾ ಕಾಲೇಜುಗಳ ಶಿಕ್ಷಕರ ಮತ್ತು ಶಾಲೆಗಳ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸಿದ್ದಾರೆ ಎಂದು ಬಳಗದ ಸಂಚಾಲಕ ಬಿ.ಎನ್.ರಾಮರೆಡ್ಡಿ ತಿಳಿಸಿದ್ದಾರೆ.

ಡಾ || ವೈ.ಎ.ನಾರಾಯಣಸ್ವಾಮಿ ಅವರು ಬೆಂಗಳೂರು ವಿ.ವಿ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ, ಸಿಂಡಿಕೇಟ್ ಸದಸ್ಯರಾಗಿ, ವಿಧಾನ ಪರಿಷತ್‌ನಲ್ಲಿ ಉಪನಾಯಕರಾಗಿ, ಸದನದ ಅರ್ಜಿ ಸಮಿತಿ ಸದಸ್ಯರಾಗಿ, ಪರಿಷತ್ತಿನ ಹಿಂದುಳಿದ ವರ್ಗಗಳ ಸಮಿತಿಯ ಸದಸ್ಯರಾಗಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸದಸ್ಯರಾಗಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಪಕ್ಷವು ನೀಡಿದ ಜವಾಬ್ದಾರಿಯನ್ನು ವಹಿಸಿಕೊಂಡು ಸಂಪೂರ್ಣವಾಗಿ ಯಶಸ್ವಿಗೊಳಿಸಿದ್ದಾರೆ. ಹಾಗಾಗಿ, ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸ್ಥಾನ ನೀಡುವುದು ಔಚಿತ್ಯವೆಂದು ಅವರು ಅಭಿಪ್ರಾಯಿಸಿದ್ದಾರೆ.

ಇತ್ತೀಚೆಗೆ ನಡೆದ ಆಗ್ನೆಯ ಪದವಿಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದಿಂದ ಪ್ರತಿನಿಧಿಸಿದ್ದ ಚಿದಾನಂದ ಎಂ.ಗೌಡ ಅವರ ಗೆಲುವಿಗೆ ಮತ್ತು ತಮಿಳುನಾಡಿನ ಈರೋಡು ಜಿಲ್ಲೆಯ ಮೊಡಕುರಿಚಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಅಭ್ಯರ್ಥಿ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದಾರೆ. ಇವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸ್ಥಾನ ನೀಡಿ ಶಿಕ್ಷಣ ಕ್ಷೇತ್ರದಲ್ಲಿರುವ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಅವಕಾಶ ಮಾಡಿಕೊಡುವಂತೆ ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!