ವಿಶ್ವ ಹಿಂದೂ ಪರಿಷತ್ ಮುಖಂಡ ; ಕೇಶವ ಹೆಗಡೆ ವಿಧಿವಶ
ಶಿರಸಿ: ವಿಶ್ವ ಹಿಂದು ಪರಿಷತ್ ಹಿರಿಯ ಮುಖಂಡ, ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಬುಧವಾರ ಬೆಂಗಳೂರಿನಲ್ಲಿ ಹೃದಯಾಘಾತದಿಂದ ವಿಧಿವಶರಾದರು. ಶಂಕರಪುರದಲ್ಲಿರುವ ವಿಶ್ವ ಹಿಂದು ಪರಿಷತ್ ಕಾರ್ಯಾಲಯದಲ್ಲಿ ಸಂಘಟನೆಯ ಕಾರ್ಯದಲ್ಲಿ ತೊಡಗಿದ್ದಾಗ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕೇಶವ ಹೆಗಡೆ ಅವರಿಗೆ ಅತೀವ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ಸಮೀಪದಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಕೊನೆಯುಸಿರೆಳೆದಿದ್ದರು.
ಉತ್ತರ ಕನ್ನಡ ಜಿಲ್ಲೆ ಶಿರಸಿಯ ತಟ್ಟಿಸರ ಮಣ್ಣಿಮನೆ ಮೂಲದ ಕೇಶವ ಹೆಗಡೆ ಅವರು ವಿದ್ಯಾರ್ಥಿಯಾಗಿದ್ದಾಗಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿದ್ದವರು. ಸಂಘದ ಶಿಕ್ಷಣ ಪಡೆದ ನಂತರ ಪೂರ್ಣಾವಧಿ ಪ್ರಚಾರಕರಾಗಿ ತಮ್ಮನ್ನು ತೊಡಗಿಸಿಕೊಂಡ ಅವರು ವಿಶ್ವ ಹಿಂದೂ ಪರಿಷತ್‌ನ ಸಂಘಟನಾ ಜವಾಬ್ಧಾರಿ ವಹಿಸಿಕೊಂಡಿದ್ದರು.
ವಿಶ್ವ ಹಿಂದೂ ಪರಿಷತ್ತಿನ ಬೆಂಗಳೂರು ಕ್ಷೇತ್ರದ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಕೇಶವ ಹೆಗಡೆ ಅವರು ಇಂದು ಹೃದಯಾಘಾತದಿಂದ ಕಾಲವಾಗಿರುತ್ತಾರೆ.
ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ.
ಓಂ ಶಾಂತಿ. pic.twitter.com/2BAAj6tS9b
— Basanagouda R Patil (Yatnal) (@BasanagoudaBJP) July 5, 2023
ಸಂಘದ ಹಿರಿಯರಾದ ಕೇಶವ ಹೆಗಡೆ ನಿಧನಕ್ಕೆ ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್, ಸಿ.ಟಿ.ರವಿ ಸೇರಿದಂತೆ ಬಿಜೆಪಿ ನಾಯಕರನೇಕರು ದುಃಖ ವ್ಯಕ್ತಪಡಿಸಿದ್ದಾರೆ.
