ವಿವಿಧ ಬೇಡಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಎಐಟಿಯುಸಿ ವತಿಯಿಂದ ಪ್ರತಿಭಟನೆ

IMG-20210924-WA0028

 

ದಾವಣಗೆರೆ: ಮುಂಚೂಣಿ ಯಲ್ಲಿರುವ ಅಂಗನವಾಡಿ, ಬಿಸಿಯೂಟ ತಯಾರಕರು ಹಾಗೂ ಆಶಾ ಕಾರ್ಯಕರ್ತರಿಗೆ ನಿರ್ದಿಷ್ಟ ಕಾಲಮಿತಿಯೊಳಗೆ ಉಚಿತ ಕೋವಿಡ್ ಲಸಿಕೆ ನೀಡುವುದು. ಸುರಕ್ಷಾ ಸಾಧನಗಳನ್ನು ಒದಗಿಸಬೇಕು, ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ಜಿಲ್ಲಾ ಸಮಿತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಯೋಜನೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲಸಗಾರರ ಸಂಘಟನೆಗಳ ಜಂಟಿ ವೇದಿಕೆಯು ಇಂದು ಕರೆ ನೀಡಿರುವ ಭಾರತ್ ಬಂದ್‌ಗೆ ಬೆಂಬಲಿಸಿ ಎಐಟಿಯುಸಿ ನೇತೃತ್ವದಲ್ಲಿ ಅಂಗನವಾಡಿ, ಆಶಾ, ಬಿಸಿಯೂಟ ತಯಾರಕರು ಇಲ್ಲಿನ ಜಯದೇವ ವೃತ್ತದಲ್ಲಿ ಜಮಾಯಿಸಿ, ಪ್ರತಿಭಟನೆ ನಡೆಸಿ, ಉಪ ವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಎಸಿ ಮುಖಾಂತರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.

ಫೆಡರೇಷನ್ ಜಿಲ್ಲಾಧ್ಯಕ್ಷೆ ಎಂ.ಬಿ.ಶಾರದಮ್ಮ ಮಾತನಾಡಿ, ವಿವಿಧ ಯೋಜನೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲಸಗಾರರನ್ನು ಕಾರ್ಮಿಕರೆಂದು ಪರಿಗಣಿಸಬೇಕು, ಕೇಂದ್ರ ಯೋಜನೆಗಳಾದ ಐಸಿಡಿಎಸ್, ಎನ್‌ಹೆಚ್‌ಎಂ ಮತ್ತು ಎಂಡಿಎಂಎಸ್ ಕೆಲಸಗಾರರನ್ನು ಖಾಯಂಗೊಳಿಸಿ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವುದು,
ಇಂಡಿಯನ್ ಲೇಬರ್ ಕಾನ್ಫರೆನ್ಸ್ನ 45 ಹಾಗೂ 46ನೇ ಅಧಿವೇಶನದ ಶಿಫಾರಸ್ಸಿನಂತೆ ಯೋಜನೆಗಳ ಕೆಲಸಗಾರರನ್ನು ಕಾರ್ಮಿಕರೆಂದು ಪರಿಗಣಿಸಿ ಮಾಸಿಕ ಕನಿಷ್ಟ 21 ಸಾವಿರ ರೂ. ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಕರೋನಾ ಸಂದರ್ಭದಲ್ಲಿ ಮುಂಚೂಣಿಯಲ್ಲಿದ್ದು ಅಂಗನವಾಡಿ, ಆಶಾ ಕಾರ್ಯಕರ್ತರು ಮತ್ತು ಬಿಸಿಯೂಟ ತಯಾರಕರು ಸೇವೆಸಲ್ಲಿಸಿದ್ದಾರೆ. ಈ ಎಲ್ಲಾ ಕರ‍್ಯಕರ್ತೆಯರಿಗೆ 50 ಲಕ್ಷ ರೂ.ಗಳ ಆರೋಗ್ಯ ವಿಮೆ ಮಾಡಿಸಬೇಕು, ಸೇವೆಯಲ್ಲಿದ್ದಾಗ ನಿಧನರಾದವರಿಗೆ ಸೌಲಭ್ಯ ಕಲ್ಪಿಸಬೇಕು, ಹೆಚ್ಚುವರಿಯಾಗಿ ಮಾಸಿಕ 10 ಸಾವಿರ ರೂ. ಕೋವಿಡ್ ಭತ್ಯೆ ನೀಡಬೇಕು, ಕಾಲಮಿತಿಯೊಳಗೆ ಉಚಿತ ಲಸಿಕೆ ನೀಡಬೇಕು, ಮೂಲ ಸೇವೆ ಒದಗಿಸುವ ಯೋಜನೆಗಳ ಖಾಸಗೀಕರಣ ಕೈಬಿಡಬೇಕು, ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಸ್.ಎಸ್.ಮಲ್ಲಮ್ಮ, ವಿಶಾಲಾಕ್ಷಿ, ರೇಣುಕಮ್ಮ, ಸುಧಾ, ಕಾಳಮ್ಮ, ಆವರಗೆರೆ ಚಂದ್ರು, ಆವರಗೆರೆ ವಾಸು, ಆವರಗೆರೆ ಉಮೇಶ್ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!