ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿದ ಜಿಲ್ಲಾ ಪಂಚಾಯತ್ ಪ್ರತಿಭಟನೆ

IMG-20210716-WA0010

 

ದಾವಣಗೆರೆ: ಬಿಲ್ ಕಲೆಕ್ಟರ್ ಮತ್ತು ಗುಮಾಸ್ತ ಹುದ್ದೆಯಿಂದ ಗ್ರೇಡ್ -2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಬಡ್ತಿ ನೀಡಲು ಹಾಗೂ 15 ನೇ ಹಣಕಾಸು ಯೋಜನೆಯಡಿ ನೀರುಗಂಟಿ ಮತ್ತು ಜಾಡ ಮಾಲಿಗಳಿಗೆ ಬಾಕಿ ವೇತನ ನೀಡುವಂತೆ ಒತ್ತಾಯಿಸಿ, ಸಿ.ಐ.ಟಿ.ಯು ನೇತೃತ್ವದಲ್ಲಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿದ ಜಿಲ್ಲಾ ಪಂಚಾಯತ್ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಪಂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.

ಸರ್ಕಾರದ ಆದೇಶದಂತೆ 15 ನೇ ಹಣಕಾಸು ಯೋಜನೆಯಡಿ ಆಡಳಿತ ವೆಚ್ಚದಲ್ಲಿ ಶೇ.10 ಹಾಗೂ ಸ್ಥಳೀಯ ತೆರಿಗೆ ಸಂಗ್ರಹದಲ್ಲಿ ಶೇ.40 ಹಣವನ್ನು ಸಿಬ್ಬಂದಿ ವೇತನಕ್ಕೆ ಉಪಯೋಗಿಸಬೇಕು, ಬಿಲ್ ಕಲೆಕ್ಟರ್ ಹುದ್ದೆಯಿಂದ ಗ್ರೇಡ್ -2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಬಡ್ತಿ ನೀಡಬೇಕು, ಸಂಬಳಕ್ಕಾಗಿ 890 ಕೋಟಿ ಹಣದ ಅವಶ್ಯಕತೆಯಿದ್ದು 518 ಕೋಟಿ ಮಾತ್ರ ಹಿಂದಿನ ಸರ್ಕಾರ ಮಂಜೂರಾತಿ ಮಾಡಿದ್ದು ಸಂಬಳಕ್ಕಾಗಿ ಬೇಕಾಗಿರುವ 372 ಕೋಟಿ ರೂ., ಹಣವನ್ನು ಕೂಡಲೇ ಮಂಜೂರು ಮಡುವಂತೆ ಧರಣಿ ನಿರತರು ಒತ್ತಾಯಿಸಿದರು.

ಕರವಸೂಲಿಗಾರ, ಗುಮಾಸ್ತ, ಡಾಟಾ ಎಂಟ್ರಿ ಆಪರೇಟರ್‌ಗಳನ್ನು ‘ಸಿ’ ಗ್ರೂಪ್ ಹಾಗೂ ವಾಟರ್ ಮ್ಯಾನ್, ಜವಾನ, ಸ್ವಚ್ಛತಗಾರರನ್ನು ‘ಡಿ’ ಗ್ರೂಪ್ ನೌಕರರೆಂದು 2019ರ ಜುಲೈ 23ರ ಸರ್ಕಾರಿ ಆದೇಶದನ್ವಯ ಬಾಕಿ ಉಳಿದ ಎಲ್ಲಾ ನೌಕರರಿಗೂ ಜಿಲ್ಲಾ ಪಂಚಾಯಿತಿ ಅನುಮೋದನೆ ನೀಡಬೇಕು, ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಗ್ರಾಮ ಪಂಚಾಯಿತಿ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರದ ಆದೇಶದಂತೆ ನೇಮಕಾತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷರು ಕೆ.ಎಂ. ಉಮೇಶ್ ಕೈದಾಳೆ, ಎಸ್.ಸಿ. ಶ್ರೀನಿವಾಸಚಾರ್ ಸೇರಿದಂತೆ ನೌಕರ ವರ್ಗದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!